ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ಕಾರ್ಯಕ್ರಮ
www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಮಾ.12 ರಂದು ಸಂಜೆ 4 ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ಸಂಚಾಲಕ ಉದಯ ವೆಂಕಟೇಶ್ ಭಟ್ ತಿಳಿಸಿದ್ದಾರೆ.
ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಯಕ್ಷಗಾನ ರಂಗದ ಖ್ಯಾತ ಹಾಸ್ಯಗಾರ ದಿವಂಗತ ನಯನಕುಮಾರ್ ಅವರ ಸ್ಮರಣಾರ್ಥ ಕಲಾ ನಯನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ್ ಕುಮಾರ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಪುತ್ತೂರು ಭಾವನ ಕಲಾ ಆಟ್ಸ್ ೯ನ ವಿಘ್ನೇಶ್ ವಿಶ್ವಕರ್ಮ ದಂಪತಿಯನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದ ಅವರು ಸಮಾರಂಭದ ದೀಪ ಪ್ರಜ್ವಲನೆಯಾದ ಬಳಿಕ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ವಿಶೇಷ ಬೆಳಕಿನ ವಿನ್ಯಾಸದಲ್ಲಿ ನೃತ್ಯಧಾರ ನಡೆಯವುದು. ವಿದುಷಿ ರೋಹಿಣಿ ಉದಯ್ ಅವರಿಂದ ನವಗ್ರಹ ಎಂಬ ವಿನೂತನ ಪರಿಕಲ್ಪನೆಯ ನೃತ್ಯರೂಪಕ ನಡೆಯಲಿದೆ. ಪುತ್ತೂರು ನಗರಸಭೆಯ ಅಧ್ಯಕ್ಷ ಜೀವಂಧರ ಜೈನ್ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ. ಸಚಿವರಾದ ವಿ. ಸುನಿಲ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್್ ಉಳಿಪ್ಪಾಡಿಗುತ್ತು, ಕನ್ನಡ ಸಾಹಿತ್ಯ ಪರಿಷತ್
ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜೇಶ್, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಕೇಂದ್ರದ ಖಜಾಂಚಿ ಜಯಲಕ್ಷ್ಮೀ,ಸದಸ್ಯೆ ರೂಪಕಲಾ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.
Be the first to comment on "ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಾ.12ರ ಸಂಜೆ ನೃತ್ಯಧಾರ"