ಮೇ 21ರಂದು ಮಿತ್ತಬೈಲ್ ಮಖಾಂ ಉರೂಸ್: ಕಾರ್ಯಕ್ರಮಗಳಿಗೆ ಚಾಲನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಮುಹಿಯ್ಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್ ಇದರ ವಠಾರದಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಹಝ್ರತ್ ಶೈಖ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮೇ 21ರಂದು ನಡೆಯಲಿದೆ.

ಉರೂಸ್ ಕಾರ್ಯಕ್ರಮದ ನೇತೃತ್ವವನ್ನು ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷ, ಮಿತ್ತಬೈಲ್ ಖಾಝಿ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ  ತಂಙಳ್ ವಹಿಸಲಿದ್ದಾರೆ.

ಜಾಹೀರಾತು

ಉರೂಸ್ ಪ್ರಯುಕ್ತ ಮೇ 14ರಿಂದ 21ರ ವರೆಗೆ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮ ನಡೆಯಲಿದ್ದು ಹಲವಾರು ವಾಗ್ಮಿಗಳು, ಉಲೆಮಾ ನೇತಾರರು, ಸಾದಾತ್ ಗಳು ಭಾಗವಹಿಸಲಿದ್ದಾರೆ ಎಂದು ಮಿತ್ತಬೈಲ್ ಜಮಾಅತ್ ಅಧ್ಯಕ್ಷ ಸಾಗರ್ ಮುಹಮ್ಮದ್ ಹಾಗೂ ಉರೂಸ್ ಕಮಿಟಿ ಅಧ್ಯಕ್ಷ ಅಹ್ಮದ್ ಬಾವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉರೂಸ್ ಕಾರ್ಯಕ್ರಮಕ್ಕೆ ಶುಕ್ರವಾರ ದರ್ಗಾ ಝಿಯಾರತ್ ಹಾಗೂ ದ್ವಜಾರೋಹಣ ಮಾಡುವ ಮೂಲಕ ಮಿತ್ತಬೈಲ್ ಖತೀಬ್ ಅಶ್ರಫ್ ಫೈಝಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಇರ್ಷಾದ್ ದಾರಿಮಿ ಮಿತ್ತಬೈಲ್, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಫಲುಲ್ ತಂಙಳ್, ಕೋಶಾಧಿಕಾರಿ ಮುಹಮ್ಮದ್ ಅಲಿ, ಮಾಜಿ ಕಾರ್ಯದರ್ಶಿ ಅದ್ದೇಡಿ ಮುಹಮ್ಮದ್, ಉರೂಸ್ ಕಮಿಟಿ ಉಪಾಧ್ಯಕ್ಷ ಮುಹಮ್ಮದ್ ಮಜಲ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೇ 21ರಂದು ಮಿತ್ತಬೈಲ್ ಮಖಾಂ ಉರೂಸ್: ಕಾರ್ಯಕ್ರಮಗಳಿಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*