ಯಕ್ಷಗಾನ

ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ತಿಂಗಳ ಬೆಳಕು – ಏ.1ರಂದು ಯಕ್ಷಗಾನ ತಾಳಮದ್ದಳೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದ ತಿಂಗಳ ಬೆಳಕು ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ತಾಳಮದ್ದಳೆಯನ್ನು ಏಪ್ರಿಲ್ 1ರಂದು ಶುಕ್ರವಾರ ಸಂಜೆ 4 ಗಂಟೆಗೆ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

ತಿಂಗಳ ಬೆಳಕು ಎರಡನೇ ಕಾರ್ಯಕ್ರಮವಾದ ಯಕ್ಷಗಾನ ಶ್ರೀಕೃಷ್ಣ ಸಂಧಾನ ಕಥಾಪ್ರಸಂಗವನ್ನು ಲಯನ್ ಸತ್ಯನಾರಾಯಣ ರಾವ್ ಅವರ ಪ್ರಾಯೋಜಕತ್ವದಲ್ಲಿ ನಡೆಸಲಾಗುವುದು ಎಂದು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದು, ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಉದ್ಘಾಟಿಸಲಿರುವರು, ತಾಳಮದ್ದಳೆಯಲ್ಲಿ,ಮುಮ್ಮೇಳದಲ್ಲಿ ಭಾಗವತರಾಗಿ ಯುವ ಪ್ರತಿಭೆ ಸಿದ್ಧಕಟ್ಟೆ ಭರತ್ ರಾಜ್ ಶೆಟ್ಟಿ ಚೆಂಡೆ, ಮದ್ದಳೆಯಲ್ಲಿ ಮುರಳೀಧರ ನೇರಂಕಿ, ನವೀನ್ ನರಿಕೊಂಬು ಹಾಗೂ ಅರ್ಥಗಾರಿಕೆಯಲ್ಲಿ ಖ್ಯಾತ ಹವ್ಯಾಸಿ ಕಲಾವಿದರಾದ ಗೋಪಾಲ ಶೆಟ್ಟಿ ಕಳೆಂಜ, ದಿನೇಶ್ ಶೆಟ್ಟಿ ಅಳಿಕೆ ಹಾಗೂ ಸಂಕಪ್ಪ ಶೆಟ್ಟಿ ಬಿ.ಸಿ.ರೋಡು ಪಾಲ್ಗೊಳ್ಳಲಿದ್ದಾರೆ  ಎಂದು ಹೇಳಿದ್ದಾರೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರಾಗಲು ಇಚ್ಚಿಸುವವರಿಗೆ ಅದೇ ದಿನದಂದು ರುಪಾಯಿ 500,ಆಧಾರ್ ಕಾರ್ಡ್ ಪ್ರತಿ ಹಾಗೂ ಒಂದು ಭಾವಚಿತ್ರವನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts