ಬಂಟ್ವಾಳ: ವ್ಯಕ್ತಿತ್ವ ವಿಕಸನದ ಮೂಲಕ ನಾಯಕತ್ವ ಗುಣ ಬೆಳೆಸುತ್ತಿರುವ ಜೇಸಿಐ ಯು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರ ಯಶಸ್ವಿಯಾಗಲಿ ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ್ ಹೇಳಿದರು.
ಅವರು ಜೇಸಿಐ ಜೋಡುಮಾರ್ಗ ನೇತ್ರಾವತಿ ಯು ಕನ್ನಡ ಸಾಹಿತ್ಯ ಪರಿಷತ್ ಸಹಭಾಗಿತ್ವದಲ್ಲಿ ಐದು ದಿನಗಳ ಉಚಿತ ಚಿಣ್ಣರ ಬೇಸಿಗೆ ಶಿಬಿರ -2022 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಖ್ಯ ಅತಿಥಿ ಜೇಸಿಐ ಪೂರ್ವಾಧ್ಯಕ್ಷರಾದ ಸುಂದರ ಮೊಯಿಲಿಯವರು ಸೃಜನಾತ್ಮಕ, ಕಲಾ ಸಂಪನ್ನ ಶಿಕ್ಷಣ ನಮಗೆ ಬೇಕು, ವಿದ್ಯಾರ್ಥಿಗಳ ವಿಕಸನಕ್ಕೆ ಇಂತಹ ಶಿಬಿರಗಳು ಅತ್ಯಂತ ಅಗತ್ಯ ಎಂದರು. ಅಧ್ಯಕ್ಷತೆಯನ್ನು ಜೇಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷ ಹರಿಪ್ರಸಾದ್ ಕುಲಾಲ್ ವಹಿಸಿದ್ದರು. ನಿಕಟಪೂರ್ವಾಧ್ಯಕ್ಷೆ ಶೈಲಜಾ ರಾಜೇಶ್, ಸಂಪನ್ಮೂಲ ವ್ಯಕ್ತಿ ಜಯಂತಿ ಗಂಗಾಧರ್ ಉಪಸ್ಥಿತರಿದ್ದರು. ಜೇಸಿ ರೇಖಾ ರಾವ್ ಜೇಸಿವಾಣಿ ವಾಚಿಸಿದರು. ಉಪಾಧ್ಯಕ್ಷ ರವೀಂದ್ರ ಕುಕ್ಕಾಜೆ ವಂದಿಸಿದರು.