ಬಂಟ್ವಾಳ: ಮಹಾರಥೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಇದೇ ಸಂದರ್ಭ ಕ್ಷೇತ್ರದ ಅಭಿವೃದ್ಧಿ ಹಾಗೂ ಸುಸಜ್ಜಿತ ಗೋಶಾಲೆ ನಿರ್ಮಾಣಕ್ಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮನವಿ ಸಲ್ಲಿಸಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು ಅವರು ಸಿಎಂ ಅವರನ್ನು ಸನ್ಮಾನಿಸಿದರು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಸಹಾಯಕ ಕಮೀಷನರ್ ಮದನ್ ಮೋಹನ್ ಸಿ, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋಣಾವಣೆ, ಎಡಿಶನಲ್ ಎಸ್ಪಿ ಕುಮಾರಚಂದ್ರ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಮೊದಲಾದವರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪೊಳಲಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ ಸಲ್ಲಿಕೆ"
Be the first to comment on "ಪೊಳಲಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ ಸಲ್ಲಿಕೆ"