ಬಂಟ್ವಾಳ

ರಮಾನಾಥ ರೈ ನೇತೃತ್ವದ ಬಂಟ್ವಾಳ ಕಂಬಳಕ್ಕೆ ಅದ್ದೂರಿ ಚಾಲನೆ

FOR ADVERTISEMENTS PLEASE CONTACT: HARISH MAMBADY, 9448548127

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಈ ಸೀಸನ್ ನ ಕೊನೆಯ ಕಂಬಳವಾಗಿರುವ ಬಂಟ್ವಾಳ ತಾಲೂಕಿನ ನಾವೂರಿನಲ್ಲಿ 11ನೇ ವರ್ಷದ ಮೂಡೂರು ಪಡೂರು ಹೆಸರಿನ ಬಂಟ್ವಾಳ ಕಂಬಳಕ್ಕೆ ಅದ್ದೂರಿಯ ಚಾಲನೆ ದೊರಕಿದೆ.

ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ  ವಿಖ್ಯಾತಾನಂದ ಸ್ವಾಮೀಜಿ ಉದ್ಘಾಟಿಸಿ, ಶುಭ ಹಾರೈಸಿದರು. ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ಭಾವೈಕ್ಯಕ್ಕೆ ಕಂಬಳ ಮುನ್ನುಡಿಯಾಗಲಿ ಎಂದು ಆಶಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪಿಯೂಸ್ ಎಲ್. ರೋಡ್ರಿಗಸ್ ಮುಂದಾಳತ್ವದಲ್ಲಿ ಕಂಬಳ ನಡೆಯುತ್ತಿದೆ.

ಜಾಹೀರಾತು

ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈಅಧ್ಯಕ್ಷತೆ ವಹಿಸಿದ್ದರು.ಅಲ್ಲಿಪಾದೆ ಸಂತ ಅಂತೊನಿ ಚರ್ಚ್ ಧರ್ಮಗುರು ಫೆಡ್ರಿಕ್ ಮೊಂತೆರೊ, ನಿವೃತ್ತ ತಹಸೀಲ್ದಾರ್ ಮೋಹನ ರಾವ್, ನಾವೂರು ಗ್ರಾಪಂ ಅಧ್ಯಕ್ಷ ಉಮೇಶ್ ಕುಲಾಲ್, ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಪತ್ರಕರ್ತ ವಾಲ್ಟರ್ ನಂದಳಿಕೆ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ನಾವೂರು ಗ್ರಾಪಂ ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೋರಸ್, ಪ್ರಮುಖರಾದ ಜೆ.ಆರ್.ಲೋಬೊ, ಕಂಬಳ ಸಮಿತಿ ಸಂಚಾಲಕ ಪದ್ಮಶೇಖರ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲಿಯಾನ್, ಬೇಬಿ ಕುಂದರ್, ಅವಿಲ್ ಮಿನೇಜಸ್, ಸುದರ್ಶನ್ ಜೈನ್, ಅಬ್ಬಾಸ್ ಆಲಿ ಡೆನ್ಝಿಲ್ ನೊರೊನ್ಹ, ಶಬೀರ್ ಮತ್ತಿತರರು ಇದ್ದರು. ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ .ರೋಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ರಾಜೀವ ಕಕ್ಯಪದವು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago