FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಕಲ್ಲಡ್ಕದಲ್ಲಿರುವ ಜಿಪಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ತಾಲೂಕು ಮಟ್ಟದ ಆರೋಗ್ಯ ಮೇಳವನ್ನು ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲೇ ವಿಶೇಷ ಎಂಬಂತೆ ಬಂಟ್ವಾಳದಲ್ಲಿ ಕೆಎಸ್‌ಆರ್‌ಟಿಸಿ ಐಸಿಯು ಬಸ್ಸು ಹಳ್ಳಿ ಹಳ್ಳಿಗಳಲ್ಲಿ ಆರೋಗ್ಯ ಸೇವೆ ನೀಡಿ ಈ ವಿಚಾರ ಪ್ರಧಾನಿಗಳ ಗಮನವನ್ನೂ ಸೆಳೆದಿದೆ ಎಂದರು.
ದ.ಕ.ಜಿಲ್ಲಾಡಳಿತ, ದ.ಕ.ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ಎ.ಜೆ.ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜನೆಗೊಂಡ ಮೇಳದಲ್ಲಿ ವಿವಿಧ ರೋಗಗಳಿಗೆ ತಜ್ಞವೈದ್ಯರಿಂದ ಚಿಕಿತ್ಸೆ, ಸಲಹೆ ಹಾಗೂ ಅರಿವು ಮೂಡಿಸುವ ಕಾರ್ಯವೂ ನಡೆಯಿತು. ಇದೇ ವೇಳೆ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಶಾಸಕರು ಉದ್ಘಾಟಿಸಿದರು.
ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಮಾತನಾಡಿ, ಬಂಟ್ವಾಳದ ಕೋವಿಡ್ ನಿರ್ವಹಣೆಯಲ್ಲಿ ಸಂಘಟಿತ ಪ್ರಯತ್ನದಿಂದಾಗಿ ಯಶಸ್ಸು ಕಾಣಲು ಸಾಧ್ಯವಾಯಿತು ಎಂದರು. ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಎಂ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು, ಗೋಳ್ತಮಜಲು ಗ್ರಾ.ಪಂ.ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಇಲಾಖಾ ಅನುಷ್ಠಾನಾಧಿಕಾರಿಗಳಾದ ಡಾ. ರಾಜೇಶ್, ಡಾ. ಬದ್ರುದ್ದಿನ್, ಡಾ. ಕಿಶೋರ್, ಎ.ಜೆ.ಮೆಡಿಕಲ್ ಕಾಲೇಜಿನ ವೈದ್ಯೆ ಡಾ. ಆಕಾಂಕ್ಷಾ, ಬಂಟ್ವಾಳ ಸಿಡಿಪಿಒ ಗಾಯತ್ರಿ ಕಂಬಳಿ, ವಿಟ್ಲ ಸಿಡಿಪಿಒ ಉಷಾ, ಆಯುಷ್ ವೈದ್ಯಾಧಿಕಾರಿ ಡಾ.ಮಣಿಕರ್ಣಿಕಾ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಧುಸೂಧನ ಐತಾಳ್, ಮುಖ್ಯೋಪಾಧ್ಯಾಯ ಅಬೂಬಕ್ಕರ್ ಅಶ್ರಫ್ ಉಪಸ್ಥಿತರಿದ್ದರು. ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರ ಸ್ವಾಗತಿಸಿದರು. ಡಾ. ಉಮೇಶ್ ಅಡ್ಯಂತಾಯ ವಂದಿಸಿದರು. ಆರೋಗ್ಯ ಇಲಾಖೆ ನಿವೃತ್ತ ಅಧಿಕಾರಿ ಜಯರಾಮ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.