FOR ADVERTISEMENTS PLEASE CONTACT: HARISH MAMBADY, 9448548127
ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಬಯಲು ರಂಗಮಂಟಪದಲ್ಲಿ ಮಂಗಳೂರು ಪುಳಿಂಚ ಸೇವಾ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು. ಸಂಸ್ಮರಣಾ ಭಾಷಣವನ್ನು ವಿದ್ವಾಂಸ ಡಾ. ಎಂ.ಪ್ರಭಾಕರ ಜೋಶಿ ಮಾಡಿದರು. ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಟೀಲು ಮೇಳದ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಕಲ್ಲಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯಅತಿಥಿಯಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಶುಭ ಹಾರೈಸಿದರು, ಮಂಗಳೂರು ಯಕ್ಷಾಂಗಣ ಕಾರ್ಯಾಧ್ಯಕ್ಷ ಪ್ರೊ| ಭಾಸ್ಕರ ರೈ ಕುಕ್ಕುವಳ್ಳಿ ಅವರು ಅಭಿನಂದನಾ ಭಾಷಣ ಮಾಡಿದರು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭಹಾರೈಸಿದರು. ಹಿರಿಯ ಕಲಾವಿದರಾದ ಬೆಳ್ಳಾರೆ ವಿಶ್ವನಾಥ ರೈ, ಬಾಯಾರು ರಘುನಾಥ ಶೆಟ್ಟಿ, ಕೊಳ್ತಿಗೆ ನಾರಾಯಣ ಗೌಡ, ಜಪ್ಪು ದಯಾನಂದ ಶೆಟ್ಟಿ, ಮುಂಡಾಜೆ ಬಾಲಕೃಷ್ಣ ಶೆಟ್ಟಿ ಅವರಿಗೆ ಪುಳಿಂಚ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿದ ಡಾ. ದೇವದಾಸ್ ಕಾಪಿಕಾಡ್, ಎಸೆಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿ ಜೀವಿತಾ ಹಾಗೂ ಹಿರಿಯ ಟೆಂಟಿನ ಮೇಸ್ತ್ರಿ ಪೂವಪ್ಪ ಪೂಜಾರಿ ಅವರನ್ನು ಗೌರವಿಸಲಾಯಿತು. ಕ್ಷೇತ್ರದ ಆಡಳಿತದಾರ, ನ್ಯಾಯವಾದಿ ಶ್ರೀಧರ ಶೆಟ್ಟಿ ಪುಳಿಂಚ ಸ್ವಾಗತಿಸಿದರು. ಪ್ರತಿಭಾ ಶೆಟ್ಟಿ ವಂದಿಸಿದರು. ಹಿರಿಯ ಕಲಾವಿದ ಅಶೋಕ ಭಟ್ ಉಜಿರೆ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ ಚಂದ್ರವಾಳಿ ವಿಲಾಸ ಯಕ್ಷಗಾನ, ಕುರೆಪಟ್ ತುಳು ನಾಟಕ ಹಾಗೂ ಶ್ರೀ ಕಲ್ಲುರ್ಟಿ ದೈವದ ಕೋಲ ನೆರವೇರಿತು.