ಪುಂಜಾಲಕಟ್ಟೆ

ಪುಂಜಾಲಕಟ್ಟೆಯಲ್ಲಿ 14ನೇ ವರ್ಷದ ಸಾಮೂಹಿಕ ವಿವಾಹ: ಹಸೆಮಣೆಗೇರಿದ 20 ಜೋಡಿ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಪುಂಜಾಲಕಟ್ಟೆಯಲ್ಲಿರುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಯೋಜಿಸಿರುವ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಭಾನುವಾರ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆದಿದ್ದು, ಇಪ್ಪತ್ತು ಜೋಡಿ ಹಸೆಮಣೆಗೇರಿದರು. ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸಾಮೂಹಿಕ‌ ವಿವಾಹದ ಮೂಲಕ ಹೊಸಚಾರಿತ್ರ್ಯವನ್ನು ಬರೆದಿದೆ ಎಂದು ಮಾಣಿಲ ಶ್ರೀ ಧಾಮದ ಮೋಹನದಾಸ  ಸ್ವಾಮೀಜಿ‌ ತಮ್ಮ ಆಶೀರ್ವಾದದಲ್ಲಿ ಹೇಳಿದರು. ಈ ಸಂದರ್ಭ ಮಾತನಾಡಿದ ಸ್ವಸ್ತಿಕ್ ಫ್ರೆಂಡ್ಸ್ ಗೌರವಾಧ್ಯಕ್ಷ ಜಿಪಂ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಭಾನುವಾರ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ   ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 38ನೇ ಸಂಭ್ರಮಾಚರಣೆಯ ಪ್ರಯುಕ್ತ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹದಲ್ಲಿ 20 ವಧು-ವರರು ಹಸೆಮಣೆಗೇರಿದ್ದಾರೆ. ಮುಂದಿನ ವರ್ಷ ಅದ್ದೂರಿಯ ಕಾರ್ಯಕ್ರಮ ನಡೆಸಲಿದ್ದೇವೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಪೆದುಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ‌ ಅಧ್ಯಕ್ಷ ಬಡಾಜೆಗುತ್ತು ರವಿಶಂಕರ ಶೆಟ್ಟಿ ಶುಭ ಹಾರೈಸಿದರು, ಶ್ರೀ.ಕ್ಷೇ.ಧ.ಗ್ರಾ.ಯೋ.ಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂಬೈ ಉದ್ಯಮಿ‌ ಸುಂದರರಾಜ್ ಹೆಗ್ಡೆ ದಂಪತಿ, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ್ ಎಂ,  ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ,ಮಾಜಿ ಸಚಿವ ನಾಗರಾಜ ಶೆಟ್ಟಿ, ಉದ್ಯಮಿ ಹರೀಂದ್ರ ಪೈ, ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಹೆಗ್ಡೆ, ತಾ.ಪಂ.ಮಾಜಿ ಸದಸ್ಯರಾದ ಮಾಧವ ಮಾವೆ, ಜಿಪಂ ಮಾಜಿ ಸದಸ್ಯೆ ಮಂಜುಳಾ ಮಾವೆ, ತುಳುನಾಡು ರಕ್ಷಣಾ ವೇದಿಕೆ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ, ಪಿಲಾತಬೆಟ್ಟು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ, ಮಾಲಾಡಿ ಗ್ರಾಪಂ ಸದಸ್ಯ ಪುನೀತ್ ಕುಮಾರ್, ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಉದ್ಯಮಿ ಓಂಪ್ರಸಾದ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಐ. ಸುಕೇತ್ ಅತಿಥಿಗಳಾಗಿದ್ದರು.
ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ:  
ವಿವಿಧ ಕ್ಷೇತ್ರದ  ಸಾಧಕರಾದ  ಸುಧಾಕರ ಆಚಾರ್ಯ(ಉದ್ಯಮ),ಅರ್ಜುನ್ ಭಂಡಾರ್ಕರ್ (ಸಮಾಜ ಸೇವೆ), ರಾಜೇಂದ್ರ ಕಂರ್ಬಡ್ಕ(ಉದ್ಯಮ) ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಂ.ಡಿ.ವೆಂಕಪ್ಪ(ಜನಪದ), ನಾರಾಯಣ ನಾವುಡ (ಸಮಾಜಸೇವೆ), ರಮೇಶ್‌.ಕೆ. ಪುಣಚ (ಪತ್ರಿಕೋದ್ಯಮ), ಆಪ್ತಿ ಬಿ.ಪೂಜಾರಿ (ಕಲೆ), ಯಶವಂತ ಸ್ನೇಹಗಿರಿ (ಕಲೆ) ಅವರಿಗೆ ಸ್ವಸ್ತಿಕ್ ಸಂಭ್ರಮ  ಪುರಸ್ಕಾರ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ (ಅತ್ಯುತ್ತಮ ಸಂಘಟನೆ) ಗೆ  ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿಧಿಷಾ  ಮತ್ತು ಸ್ವಾತಿ ವಾಮದಪದವು ಅವರಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು.
ವಧು-ವರರ ಮೆರವಣಿಗೆ:
ಇದಕ್ಕೂ ಮುನ್ನ  ಶ್ರೀ ಗೋಪಾಲಕೃಷ್ಣ  ದೇವಸ್ಥಾನದ ವಠಾರದಿಂದ  ವಧು-ವರರ ವೈಭವಪೂರ್ಣವಾದ ದಿಬ್ಬಣದ ಮೆರವಣಿಗೆಯು ಸಾಗಿ ಬಂದು ಮದುವೆ ಮಂಟಪದಲ್ಲಿ ಸಂಪನ್ನಗೊಂಡಿತು. ಗುರುವಾಯನಕೆರೆ ಕೃಷ್ಣಭಟ್ ಅವರ ಪೌರೋಹಿತ್ಯದಲ್ಲಿ  11 ಗಂಟೆಯ ಶುಭ ಮುಹೂರ್ತದಲ್ಲಿ 20 ಜೋಡಿ ವಧು-ವರರು  ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆಗೈದರು.  ಕ್ಲಬ್‌ನ ಅಧ್ಯಕ್ಷರಾದ ಪ್ರಶಾಂತ್ ಪುಂಜಾಲಕಟ್ಟೆ,ಕಾರ್ಯದರ್ಶಿ ಜಯರಾಜ್ ಅತ್ತಾಜೆ,ಗೌರವಾಧ್ಯಕ್ಷ ಅಬ್ದುಲ್ಲಾ ಪಿ.,ಮೊದಲಾದವರು ವೇದಿಕೆಯಲ್ಲಿದ್ದರು. ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಸ್ತಾವನೆಗೈದರು. ಕ್ಲಬ್ ನ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿದರು.ಸಂಚಾಲಕ ರಾಜೇಶ್ ಪಿ. ಬಂಗೇರ ವಂದಿಸಿದರು.ನಿವೃತ್ತ ಶಿಕ್ಷಕ ರಾಮಚಂದ್ರರಾವ್ ಕಾರ್ಯಕ್ರಮ ನಿರೂಪಿಸಿದರು.ಇದೇ ವೇಳೆ ಬಂಗ್ಲೆ ಮೈದಾನದಒಳಾಂಗಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಲಾದ 28 ಫ್ಯಾನ್ ನ್ನು ಉದ್ಘಾಟಿಸಲಾಯಿತು.

ಜಾಹೀರಾತು

ಸಾಮೂಹಿಕ ವಿವಾಹದ ಹಿನ್ನಲೆಯಲ್ಲಿ ಮಧ್ಯಾಹ್ನ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂತ್ರ ದೇವತೆ ಕ್ರಿಯೇಶನ್ಸ್ ಅವರ ನಿರ್ಮಾಣದ ಚಂದ್ರನ್ ಕಿರು ಚಿತ್ರ ಬಿಡುಗಡೆಗೊಂಡಿತು.  ಕುದ್ರೋಳಿ ಗಣೇಶ್ ಅವರಿಂದ ಮಸ್ತ್ ಮ್ಯಾಜಿಕ್  ಹಾಗೂ ದಿವಂಗತ ಕೆ.ಎನ್.ಟೇಲರ್ ವಿರಚಿತ ಕಂಡನೆ-ಬುಡೆದಿ ತುಳುನಾಟಕ  ಪ್ರದರ್ಶನಗೊಂಡಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ