ಬಂಟ್ವಾಳ

ಒಡ್ಡೂರು ಫಾರ್ಮ್ಸ್ ನಲ್ಲಿ ಏ.28ರಂದು ಕಮಲೋತ್ಸವ: ಬಂಟ್ವಾಳ ಕ್ಷೇತ್ರ ಬಿಜೆಪಿ ಕಾರ್ಯಕರ್ತರ ಕುಟುಂಬ ಸಹಿತ ಸಮಾಗಮ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ಏ.28ರಂದು ಬಿಜೆಪಿ ಕಾರ್ಯಕರ್ತರ ಸಮಾಗಮ ಕಮಲೋತ್ಸವ ಕಾರ್ಯಕ್ರಮ ನಡೆಯಲಿದೆ. ಸುಮಾರು 15 ಸಾವಿರ ಕಾರ್ಯಕರ್ತರು ಇಲ್ಲಿ ಭಾಗವಹಿಸಲಿದ್ದು, ಇಡೀ ದಿನ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ ಒಂಭತ್ತರಿಂದ ಸಂಜೆ 5ಗಂಟೆವರೆಗೆ ಈ ಕಾರ್ಯಕ್ರಮ ಉತ್ಸವ ಮಾದರಿಯಲ್ಲಿ ನಡೆಯಲಿದ್ದು, ವಿವಿಧ ಆಟೋಟ ಸ್ಪರ್ಧೆ, ಮನರಂಜನಾ ಕಾರ್ಯಕ್ರಮಗಳು ಇರಲಿವೆ. ಬೆಳಿಗ್ಗೆ ಹತ್ತು ಗಂಟೆಗೆ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸುವರು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ,ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡಬಿದಿರೆ, ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ,ಅಂಗಾರ ಹಾಗೂ ಜಿಲ್ಲೆಯ ಶಾಸಕರು ಮುಖಂಡರು ಭಾಗವಹಿಸಲಿದ್ದಾರೆ. 1ಗಂಟೆ ಅವಧಿಯ ಸಭಾ ಕಾರ್ಯಕ್ರಮ ಬಳಿಕ ಜಾತ್ರಾ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂಥ ಕಾರ್ಯಕ್ರಮವೊಂದು ರಾಜ್ಯದಲ್ಲೇ ಪ್ರಥಮ ಎಂದರು. ಉಪಾಧ್ಯಕ್ಷ ರೊನಾಲ್ಡ್ ಡಿಸೋಜ,  ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ರಂಜಿತ್ ಮೈರ, ಯಶೋಧರ ಕರ್ಬೆಟ್ಟು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts