ಜಿಲ್ಲಾ ಸುದ್ದಿ

ಒಡ್ಡೂರು ಫಾರ್ಮ್ಸ್ ನಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕಮಲೋತ್ಸವ: ಇಡೀ ರಾಜ್ಯಕ್ಕೆ ಈ ಪರಿಕಲ್ಪನೆ ವಿಸ್ತರಣೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಕಾರ್ಯಕರ್ತರ ಕುಟುಂಬ ಸಮ್ಮಿಲನವಾದ ಕಮಲೋತ್ಸವ ಕಾರ್ಯಕ್ರಮ ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆಯಡಿ ಸಾಕಾರಗೊಂಡಿದ್ದು, ಇದು ದೇಶದಲ್ಲೇ ಮೊದಲ ಬಾರಿ ನಡೆದಿದ್ದು, ರಾಜ್ಯದಾದ್ಯಂತ ಈ ಪರಿಕಲ್ಪನೆಯನ್ನು ವಿಸ್ತರಿಸುವುದಾಗಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಒಡ್ಡೂರು ಫಾರ್ಮ್ ಹೌಸ್‌ನಲ್ಲಿ, ಬಂಟ್ವಾಳ ಬಿಜೆಪಿ ಮಂಡಲದ‌ ವತಿಯಿಂದ ನಡೆದ ಕಮಲೋತ್ಸವ ವನ್ನು ಉದ್ಘಾಟಿಸಿ ಮಾತನಾಡಿದರು. ಸಚಿವ ಎಸ್. ಅಂಗಾರ, ಶಾಸಕ ಡಾ.ವೈ.ಭರತ್ ಶೆಟ್ಟಿ ಶುಭ ಹಾರೈಸಿದರು.  ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ ಮಾತನಾಡಿ, ಬಂಟ್ವಾಳ ಕಮಲೋತ್ಸವದ ಮೂಲಕ ಜಿಲ್ಲೆಗೆ ಮಾದರಿಯಾಗಿದ್ದರೆ,  ದ.ಕ.ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ  ನಿರ್ದೇಶಕಿ ಸುಲೋಚನಾ  ಭಟ್, ಅಲೆಮಾರಿ ಅಭಿವೃದ್ಧಿ ನಿಗಮದ ರವೀಂದ್ರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೂಡಾ‌ ಅಧ್ಯಕ್ಷ ದೇವದಾಸ್ ಶೆಟ್ಟಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.  ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ  ಕಾರ್ಯಕ್ರಮ‌ ನಿರ್ವಹಿಸಿದರು.  ಪ್ರಧಾನ ಕಾರ್ಯದರ್ಶಿ  ರವೀಶ್ ಶೆಟ್ಟಿ ಕರ್ಕಳ ವಂದಿಸಿದರು. ಸುಮಾರು 15 ಸಾವಿರದಷ್ಟು ಕಾರ್ಯಕರ್ತರ ದಂಡು ಕಮಲೋತ್ಸವಕ್ಕೆ ಆಗಮಿಸಿದ್ದು, ವಿವಿಧ ಆಟೋಟ, ಊಟೋಪಚಾರಗಳು ಗಮನ ಸೆಳೆದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ