FOR ADVERTISEMENTS PLEASE CONTACT: HARISH MAMBADY, 9448548127
ವಸುಧೈವ ಕುಟುಂಬಕಂ ಎಂಬ ಮಾತಿಗೆ ಒಡ್ಡೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ” ಕಮಲೊತ್ಸವ” ನಿಜವಾದ ಅರ್ಥ ನೀಡಿದೆ ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್ ಅವರು ಹೇಳಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಒಡ್ಡೂರು ಫಾರ್ಮ್ ಹೌಸ್ ನಲ್ಲಿ ಸಂಜೆ ನಡೆದ ಕಮಲೋತ್ಸವ ಕಾರ್ಯಕ್ರಮದ ಸಮಾರೋಪ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಉತ್ಸವದಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು, ಅಮೂಲಕ ಮುಂದಿನ ಪೀಳಿಗೆಗೆ ಮೌಲ್ಯಯುತ ಸಂಸ್ಕಾರಗಳ ಪರಿಚಯವಾಗಬೇಕು ಎಂದು ಅವರು ಹೇಳಿದರು.
ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಮಾತನಾಡಿ ಕಮಲೋತ್ಸವ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗಿದ್ದು, ಪಕ್ಷಕ್ಕೆ ಶಕ್ತಿ ತುಂಬಿದೆ. ಕಾರ್ಯಕರ್ತರ ಉತ್ಸಾಹ ಮುಂದಿನ ಚುನಾವಣೆ ವರೆಗೂ ಮುಂದುವರಿಯಲಿ ಎಂದು ಅವರು ಮನವಿ ಮಾಡಿದರು. ಕಾರ್ಯಕ್ರಮದ ಯಶಸ್ವಿ ಗೆ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಅವರು ಪ್ರೇರಣೆ, ಶಕ್ತಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಶಕ್ತಿಯುತವಾಗಿ ಬೆಳೆಯಲು ಕಾರ್ಯಕರ್ತರ ಸಹಕಾರ ನಿರಂತರವಾಗಿ ಇರಲಿ ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ ಬಂಟ್ವಾಳ ಕ್ಷೇತ್ರದ ಕಾರ್ಯಕರ್ತರು ಕಾರ್ಯಕರ್ತರು ಹಾಗೂ ಉತ್ತರ ವಿಧಾನ ಸಭಾ ಕ್ಷೇತ್ರದವರು ಜೊತೆಯಾಗಿ ಮಾಡಿದ ಕಮಲೋತ್ಸವ ಕಾರ್ಯಕ್ರಮದ ಈ ಅದ್ಬುತ ದಿನವನ್ನು ಮರೆಯುದಿಲ್ಲ.ಸಂತೋಷದ ಸಮಯದಲ್ಲಿ ಮಾತುಗಳು ಬರುತ್ತಿಲ್ಲ. ಪಕ್ಷ ಹಾಗೂ ಕಾರ್ಯಕರ್ತರ ಪ್ರೀತಿಗೆ ಸದಾ ಚಿರ ಋಣಿಯಾಗಿದ್ದೇನೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉದ್ಯಮಿ ನಗ್ರಿಗುತ್ತು ವಿವೇಕ್ ಶೆಟ್ಟಿ, ಎಡಪದವು ಮಹಾಶಕ್ತಿ ಕೇಂದ ಅಧ್ಯಕ್ಷ ಪ್ರಸಾದ್ ಎಡಪದವು, ಗುರುಪುರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಸೋಹನ್ ಅಧಿಕಾರಿ , ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಕಮಲೋತ್ಸವ ಕಾರ್ಯಕ್ರಮ ದಲ್ಲಿ ಬೆಳಿಗ್ಗೆ ಯಿಂದ ಸಂಜೆವರೆಗೆ ನಡೆದ ಆಟೋಟಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಮ್ಟಾಡಿ ಮಹಾಶಕ್ತಿ ಕೇಂದ್ರದ ತಂಡ ಸಮಗ್ರ ಪ್ರಶಸ್ತಿ ಯನ್ನು ಪಡೆದುಕೊಂಡಿದೆ. ಬಿಜೆಪಿ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿ ದರು. ಕಾರ್ಯ ದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು ವಂದಿಸಿದರು. ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.