10 ರೂ ರೀಚಾರ್ಜ್ ಮಾಡಲು ಹೇಳಿ 1.65 ಲಕ್ಷ ರೂ ಗುಳುಂ: ಬಿ.ಸಿ.ರೋಡಿನ ವೈದ್ಯರಿಗೆ ಮೋಸ ಮಾಡಿದ ಅನಾಮಧೇಯ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ನಿಮ್ಮ ನಂಬರ್ ಅಪ್ಡೇಟ್ ಮಾಡುತ್ತೇನೆ ಎಂದು ಹೇಳಿ, 10 ರೂ ರೀಚಾರ್ಜ್ ಮಾಡಲು ತಿಳಿಸಿ 1.65 ಲಕ್ಷ ರೂವನ್ನು ತನ್ನ ಖಾತೆಗೆ ಅಪರಿಚಿತ ಅನಾಮಧೇಯನೊಬ್ಬ ವರ್ಗಾವಣೆ ಮಾಡಿದ ಪ್ರಕರಣವೊಂದು ನಡೆದಿದೆ. ಈ ಕುರಿತು ಮಂಗಳವಾರ ಪ್ರಕರಣ ದಾಖಲಾಗಿದೆ.

ಈ ಕುರಿತು ಬಿ.ಸಿ.ರೋಡಿನ ವೈದ್ಯ ಡಾ. ಅಶ್ವಿನ್ ಬಾಳಿಗಾ ದೂರು ನೀಡಿದ್ದು, ಅವರ ಮೊಬೈಲ್ ಗೆ ಏ.29ರಂದು ಸಂಜೆ 5.30 ಗಂಟೆಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಜಿಯೋ ನಂಬರ್ನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿ  ಗೂಗಲ್  ಪ್ಲೇ ಸ್ಟೋರ್ನಿಂದ ಕ್ವಿಕ್ ಈಸಿ ಆಪ್ ಅನ್ನು ಡೌನ್ಲೋಡ್ ಮಾಡಿಸಿ ನಂತರ ವೈದ್ಯರ ಮೊಬೈಲ್ ನಲ್ಲಿ ಮೈ ಜಿಯೋ ಆಪ್ ನಲ್ಲಿ 10 ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದಾನೆ. ಅದರಂತೆ ವೈದ್ಯರು ತನ್ನ ಬ್ಯಾಂಕ್ ಎಸ್ಬಿ ಖಾತೆ ಡೆಬಿಟ್ ಕಾರ್ಡ್ ವಿವರಗಳನು ಆಪ್ ನಲ್ಲಿ ಹಾಕಿ 10 ರೂ ರಿಚಾರ್ಜ್ ಮಾಡಿರುತ್ತಾರೆ  ಕೂಡಲೇ ತನ್ನ್ ಖಾತೆಯಿಂದ 10,000ದಂತೆ  3 ಬಾರಿ  ಮತ್ತು  ರೂ 45,000ದಂತೆ 3 ಬಾರಿ ಅಪರಿಚಿತನ ಖಾತೆಗೆ ಒಟ್ಟು ರೂ 1,65,000 ಹಣ ವರ್ಗಾವಣೆಯಾಗಿರುತ್ತದೆ.  ಈ ರೀತಿಯಾಗಿ ಹಣವನ್ನು ಪಡೆದುಕೊಂಡು ವಂಚಿಸಿ ಮೋಸ ಮಾಡಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "10 ರೂ ರೀಚಾರ್ಜ್ ಮಾಡಲು ಹೇಳಿ 1.65 ಲಕ್ಷ ರೂ ಗುಳುಂ: ಬಿ.ಸಿ.ರೋಡಿನ ವೈದ್ಯರಿಗೆ ಮೋಸ ಮಾಡಿದ ಅನಾಮಧೇಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*