ವಿಟ್ಲ

ಬಾಲಕಿ ಆತ್ಮಹತ್ಯೆಗೆ ದುಷ್ಪ್ರೇರಣೆ ಆರೋಪ: ಯುವಕ ಅರೆಸ್ಟ್

FOR ADVERTISEMENTS PLEASE CONTACT: HARISH MAMBADY, 9448548127

ಕನ್ಯಾನ ಕಣಿಯೂರಿನಲ್ಲಿ ಬುಧವಾರ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ದುಷ್ಪ್ರೇರಣೆ ನೀಡಿರುವ ಕುರಿತು ಆಕೆಯ ತಂದೆ ನೀಡಿದ ದೂರಿನ ಆಧಾರದಲ್ಲಿ ಆರೋಪಿ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನನ್ನು ವಿಟ್ಲ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸಂಜೀವ ಎಂಬವರು ತನ್ನ ಅಪ್ರಾಪ್ತ ವಯಸ್ಸಿನ ಮಗಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆಗೆ ಸಾಹುಲ್ ಹಮೀದ್ ಎಂಬಾತನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡುವುದಾಗಿ ಆರೋಪಿಸಿ ದೂರು ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಉಪಾಧೀಕ್ಷಕ ಶಿವಾಂಶು ರಜಪೂತ್,ನೇತೃತ್ವದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್‌ ಹಮೀದ್‌ ಎಂಬಾತನ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ಗುರುವಾರ ರಾತ್ರಿ ಆರೋಪಿಯನ್ನುವಶಕ್ಕೆ ಪಡೆದು ದಸ್ತಗಿರಿ ಮಾಡಡಲಾಗಿದೆ. ಎಸ್‌ಪಿ ಋಷಿಕೇಶ್‌ ಭಗವಾನ ಸೋನಾವಣೆ ಮತ್ತು ಅಡಿಷನಲ್‌ ಎಸ್‌ಪಿ ಕುಮಾರ ಚಂದ್ರ ಮಾರ್ಗದರ್ಶನ, ಬಂಟ್ವಾಳ ಉಪವಿಭಾಗದ ಎಎಸ್‌ಪಿ ಶಿವಾಂಶು ರಜಪೂತ ನೇತೃತ್ವ, ವಿಟ್ಲ ಠಾಣೆ ಪೊಲೀಸ್ ನಿರೀಕ್ಷಕ ನಾಗರಾಜ್‌ ಎಚ್‌ ಈ ಸಾರಥ್ಯದಲ್ಲಿ ಪಿಎಸ್ಸೈ ಸಂದೀಪ ಕುಮಾರ್‌ ಶೆಟ್ಟಿ , ಪಿಎಸ್ಸೈ ಮಂಜುನಾಥ ಟಿ ಸಿಬ್ಬಂದಿಗಳಾದ ಡ್ಯಾನಿ ಪ್ರಾನ್ಸಿಸ್‌ ತಾವ್ರೂ ,ಪ್ರಸನ್ ,ಸೀತಾರಾಮ ಹೇಮರಾಜ,ಅಶೋಕ್‌,ಶ್ರೀಧರ ,ಕುಮಾರ ,ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್‌ಕುಮಾರ್‌ ,ದಿವಾಕರ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ ಎಂದು ಎಸ್ಪಿ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ