FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿದರು. ವಿದ್ಯಾರ್ಥಿನಿಯ ಫೋಷಕರಿಂದ ಮಾಹಿತಿ ಪಡೆದುಕೊಂಡು ಅವರಿಗೆ ಧೈರ್ಯ ತುಂಬಿ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ ಸಾವು ಬೇರೆಯೇ ರೀತಿಯಲ್ಲಿ ನಡೆದಿರುವುದಾಗಿ ಕಂಡುಬರುತ್ತಿದೆ. ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆಯಾಗುವಂತಾಗಬೇಕು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದು. ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದವರಿಗೂ ಶಿಕ್ಷೆಯಾಗಬೇಕು ಎಂದರು.
ಕನ್ಯಾನ ಗ್ರಾಮ ಪಂಚಾಯತ್ ಸದಸ್ಯ ರಘುರಾಮ ಶೆಟ್ಟಿ ಕನ್ಯಾನ, ಒಡಿಯೂರು ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ, ಲಿಂಗಪ್ಪ ಗೌಡ ಪಣೆಯಡ್ಕ, ವಿಶ್ವಹಿಂದೂ ಪರಿಷತ್ ನ ಕನ್ಯಾನ ಘಟಕದ ಅಧ್ಯಕ್ಷ ಲೊಕೇಶ್ ಗೌಡ ಕನ್ಯಾನ, ಭಜರಂಗದಳ ಸಂಚಾಲಕ ಕೃಷ್ಣಪ್ಪ ಗೌಡ ಪಣೆಯಡ್ಕ, ಭಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ, ವಿಶ್ವಹಿಂದೂ ಪರಿಷತ್ ನ ಕನ್ಯಾನ ಘಟಕದ ಕಾರ್ಯದರ್ಶಿ ಮನೋಜ್ ಕುಮಾರ್ ಬನಾರಿ, ಜಗದೀಶ್ ಸಿ.ಹೆಚ್, ದಿನೇಶ್ ಪಟ್ಲ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.