ದಡ್ಡಲಕಾಡು ಸಂಭ್ರಮೋತ್ಸವ ಹಿನ್ನೆಲೆಯಲ್ಲಿ ವಿಶೇಷ ವಾಹನ ಜಾಥಾ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ದಡ್ಡಲಕಾಡು ಸಂಭ್ರಮೋತ್ಸವ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೈಕಂಬ  ದ್ವಾರದಿಂದ ದಡ್ಡಲಕಾಡು ಶಾಲೆಗೆ ವಿದ್ಯಾದೇಗುಲ ಹೊರೆಕಾಣಿಕೆಯೊಂದಿಗೆ ವಿಶೇಷ ವಾಹನ ಜಾಥಾ ಶನಿವಾರ ಬೆಳಗ್ಗೆ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಚಾಲನೆ ನೀಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಕಾಲ್ನಡಿಗೆಯಲ್ಲಿ ಬಿ.ಸಿ.ರೋಡ್ ವರೆಗೆ ತೆರಳಿದರು.

ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಲು ಜಾಗೃತಿಯನ್ನು ಮೂಡಿಸುವ ಸಲುವಾಗಿ ಮತ್ತು ಏಕರೂಪದ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸಿ ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವ ಹರ್ಷೋತ್ಸವವಾಗಿ ವಿಶೇಷ ವಾಹನ ಜಾಥಾ ನಡೆಯುತ್ತಿದೆ ಎಂದು  ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ (ರಿ) ಅಧ್ಯಕ್ಷ ಹಾಗೂ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಹೇಳಿದರು.

ಈ ಸಂದರ್ಭ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಪ್ರಮುಖರಾದ ಸೇಸಪ್ಪ ಕೋಟ್ಯಾನ್, ತುಂಗಪ್ಪ ಬಂಗೇರ, ದೇವಪ್ಪ ಪೂಜಾರಿ, ಶೇಖರ್ ಅಂಚನ್, ಪುರುಷೋತ್ತಮ ಅಂಚನ್, ಭುವನೇಶ್ ಪಚ್ಚಿನಡ್ಕ, ಯಶೋಧರ ಕರ್ಬೆಟ್ಟು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಸಂತೋಷ್ ರಾಯಿಬೆಟ್ಟು, ರಮನಾಥ ರಾಯಿ, ಮುಖ್ಯೋಪಾಧ್ಯಾಯ ರಮಾನಂದ ಮತ್ತಿತರರು ಉಪಸ್ಥಿತರಿದ್ದು ಜಾಥಾದಲ್ಲಿ ಪಾಲ್ಗೊಂಡರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಡ್ಡಲಕಾಡು ಸಂಭ್ರಮೋತ್ಸವ ಹಿನ್ನೆಲೆಯಲ್ಲಿ ವಿಶೇಷ ವಾಹನ ಜಾಥಾ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*