ಬಾಲಕಿ ಆತ್ಮಹತ್ಯೆ ಪ್ರಕರಣ: ಕನ್ಯಾನದಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಕಣಿಯೂರಿನಲ್ಲಿ 14 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಕನ್ಯಾನ ಪೇಟೆಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ,  ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ, ವಿಹಿಂಪ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು.

ಜಾಹೀರಾತು

ಬಾಲಕಿ ಆತ್ಮಹತ್ಯೆಯ ಹಿಂದಿನ ಕಾರಣಗಳು, ವಾಮಾಚಾರ ನಡೆದಿರುವ ಸಂಗತಿಗಳು ಸಮಾಜದ ಆರೋಗ್ಯ ಕೆಡಿಸುವ ಸನ್ನಿವೇಶಗಳಾಗಿವೆ ಎಂದು ಅಭಿಪ್ರಾಯಪಟ್ಟ ಮೂವರೂ ಸ್ವಾಮೀಜಿಗಳು, ಬಾಲಕಿ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು. ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಕ.ಕೃಷ್ಣಪ್ಪ, ವಿಹಿಂದ ವಿಟ್ಲ ಅಧ್ಯಕ್ಷ ಪದ್ಮನಾಭ ಕಟ್ಟೆ, ಬಜರಂಗದಳ ವಿಟ್ಲ ಸಂಚಾಲಕ ಚಂದ್ರಹಾಸ ಕನ್ಯಾನ, ವಿಹಿಂಪ ಮುಖಂಡ ಗೋವರ್ಧನ್, ಕನ್ಯಾನ ಘಟಕಾಧ್ಯಕ್ಷ ಲೋಕೇಶ್ ಗೌಡ, ಬಜರಂಗದಳ ಸಂಚಾಲಕ ಕೃಷ್ಣಪ್ಪ ಗೌಡ ಪಣೆಯಡ್ಕ, ಕನ್ಯಾನ ಘಟಕ ವಿಹಿಂಪ ಕಾರ್ಯದರ್ಶಿ ಮನೋಜ್ ಕುಮಾರ್ ಬನಾರಿ, ಜಗದೀಶ್ ಸಿ.ಎಚ್. ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಾಲಕಿ ಆತ್ಮಹತ್ಯೆ ಪ್ರಕರಣ: ಕನ್ಯಾನದಲ್ಲಿ ವಿಹಿಂಪ, ಬಜರಂಗದಳ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*