FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ನವೋದಯ ಮಿತ್ರ ಕಲಾ ವೃಂದ (ರಿ), ನೇತ್ರಾವತಿ ಮಾತೃ ಮಂಡಳಿ 35ನೇ ವಾರ್ಷಿಕೋತ್ಸವ ಸಮಾರಂಭ ನೆತ್ತರಕೆರೆ ಶಾಲಾ ಮೈದಾನದಲ್ಲಿ ನಡೆಯಿತು. ಬೆಳಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ಬಾಲಗೋಕುಲ ಮಕ್ಕಳಿಂದ ನೃತ್ಯಸಿಂಚನ, ನೇತ್ರಾವತಿ ಮಾತೃಮಂಡಳಿ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಬಳಿಕ ನಡೆದ ಸಭಾ ಅಧ್ಯಕ್ಷತೆಯನ್ನು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನ್ಯಾಯವಾದಿ ಶೈಲಜಾ ರಾಜೇಶ್, ಸಂಘದ ಗೌರವಾಧ್ಯಕ್ಷ ಪಿ.ಸುಬ್ರಹ್ಮಣ್ಯ ರಾವ್, ಅಧ್ಯಕ್ಷ ಬಿ.ಸುರೇಶ ಭಂಡಾರಿ ಅರ್ಬಿ, ಸಂಚಾಲಕ ದಾಮೋದರ ನೆತ್ತರಕೆರೆ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಕೆ, ಮಾತೃಮಂಡಳಿ ಅಧ್ಯಕ್ಷೆ ವಸಂತಿ ರಾಮಚಂದ್ರ, ಸಂಚಾಲಕಿ ಲಲಿತಾ ಸುಂದರ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪ್ರಮುಖರಾದ ಜ್ಯೋತಿಂದ್ರ ಶೆಟ್ಟಿ ಮುಂಡಾಜೆಗುತ್ತು, ಸದಾಶಿವ ಡಿ ತುಂಬೆ, ಜೀವನ್ ಪಿಂಟೋ, ನವೀನಚಂದ್ರ ಶೆಟ್ಟಿ ಮುಂಡಾಜೆಗುತ್ತು ಮತ್ತಿತರರು ಉಪಸ್ಥಿತರಿದ್ದರು.
ಶ್ರೀಧರ್ ಎಚ್ ಪ್ರಾರ್ಥಿಸಿದರು. ಪ್ರಶಾಂತ್ ಕೆ ಸ್ವಾಗತಿಸಿದರು. ಕಾರ್ಯದರ್ಶಿ ಲೋಕೇಶ್ ಎನ್ ವರದಿ ವಾಚಿಸಿದರು. ಸಂತೋಷ್ ಕುಲಾಲ್ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು.ಈ ಸಂದರ್ಭ ಹಿರಿಯ ನಾಟಿ ವೈದ್ಯೆ ಮೀನಾಕ್ಷಿ ನಾರಾಯಣ ಆಚಾರ್ಯ ಬಿ.ಸಿ.ರೋಡ್ ಅವರನ್ನು ಸನ್ಮಾನಿಸಲಾಯಿತು. ಜೂಡೋ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕ ಪುರಸ್ಕೃತ ಗಿತೇಶ್ ನೆತ್ತರಕೆರೆ ಹಾಗೂ ಮಾಧ್ಯಮ ಕ್ಷೇತ್ರದ ಸಂತೋಷ್ ಕುಲಾಲ್ ನೆತ್ತರಕೆರೆ ಅವರನ್ನು ಅಭಿನಂದಿಸಲಾಯಿತು. ಸಭಾ ಕಾರ್ಯಕ್ರಮ ದ ಬಳಿಕ ಸಂಘದ ಸದಸ್ಯರು ಹಾಗೂ ಅತಿಥಿ ಕಲಾವಿದರ ಅಭಿನಯದ ಉಡಲೇ ಮೋಕೆದ ಕಡಲ್ ಎಂಬ ಸಾಮಾಜಿಕ ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.