ಬಂಟ್ವಾಳ ನೂತನ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅಧಿಕಾರ ಸ್ವೀಕಾರ

This image has an empty alt attribute; its file name is WhatsApp-Image-2021-11-14-at-17.57.29-629x1024.jpeg

FOR ADVERTISEMENTS PLEASE CONTACT: HARISH MAMBADY, 9448548127

This image has an empty alt attribute; its file name is SALE.jpg
This image has an empty alt attribute; its file name is WhatsApp-Image-2022-05-12-at-1.21.08-PM-723x1024.jpeg
This image has an empty alt attribute; its file name is Bantwalnews-1.jpg

ಬಂಟ್ವಾಳ: ಬಂಟ್ವಾಳದ ನೂತನ ತಹಸೀಲ್ದಾರ್ ಆಗಿ ಡಾ. ಸ್ಮಿತಾ ರಾಮು ಅವರು ಶುಕ್ರವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಅಧಿಕಾರ ಸ್ವೀಕರಿಸಿದರು. ಬಂಟ್ವಾಳದಲ್ಲಿ ಈವರೆಗೆ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್. ಅವರು ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದು, ಇದೀಗ ಅವರ ಬದಲಿಗೆ ಡಾ. ಸ್ಮಿತಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ಅಧಿಕಾರಿಯಾಗಿ ಕಳೆದ ಏಳು ವರ್ಷಗಳಿಂದ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ಇದುವರೆಗೆ ಅವರು ಮಂಡ್ಯದಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದರು.

ಜಾಹೀರಾತು

ಇಂದು ಆಗಮಿಸಿ ಅಧಿಕಾರ ಸ್ವೀಕರಿಸಿದ ನೂತನ ತಹಸೀಲ್ದಾರ್ ಅವರನ್ನು ಕಚೇರಿ ಸಿಬ್ಬಂದಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ನವೀನ್ ಬೆಂಜನಪದವು ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಸಂತೋಷ್ ಬಂಟ್ವಾಳ ತಾಲೂಕು ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ಅಧ್ಯಕ್ಷರಾದ ಅನಿಲ್. ಕೆ.ಪೂಜಾರಿ, ಹಾಗೂ ಪದಾಧಿಕಾರಿಗಳು, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ರಾದ ಮೋಹನ್ ದಾಸ್ ಕಲ್ಲಡ್ಕ ಇನ್ನಿತರರು ಸ್ವಾಗತಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ನೂತನ ತಹಸೀಲ್ದಾರ್ ಡಾ. ಸ್ಮಿತಾ ರಾಮು ಅಧಿಕಾರ ಸ್ವೀಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*