ವಿಟ್ಲ ಸಮೀಪ ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಗಿರೀಶ್ ಮತ್ತು ರಕ್ಷಿತ್ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೊಡ್ಲಿಪೇಟೆಯ ಕೆ.ಮಹಮ್ಮದ್ ಶರೀಫ್ (33) ಮತ್ತು ಉಕ್ಕುಡದ ಸಾದಿಕ್ (20) ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾದವರು.
ಈ ಕುರಿತು ವಿಟ್ಲ ಪೊಲೀಸರಿಗೆ ನೀಡಿದ ದೂರಿನಂತೆ ಮೇ.14ರಂದು ರಾತ್ರಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷೀತ್ ಕುಮಾರ್ ಎಂಬವರಿಗೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು.ತಲೆ ಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)