![](https://i0.wp.com/bantwalnews.com/wp-content/uploads/2022/05/pole.jpg?resize=777%2C437&ssl=1)
ವಿಟ್ಲದಿಂದ ಕಲ್ಲಡ್ಕಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬವೊಂದು ಬಿದ್ದ ಪರಿಣಾಮ, ಬೆಳಗಿನ ವೇಳೆ ಸುಮಾರು 9.30ರವರೆಗೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
![](https://i0.wp.com/bantwalnews.com/wp-content/uploads/2021/11/WhatsApp-Image-2021-11-14-at-17.57.29.jpeg?resize=629%2C1024&ssl=1)
![](https://i0.wp.com/bantwalnews.com/wp-content/uploads/2022/05/WhatsApp-Image-2022-05-12-at-1.21.08-PM.jpeg?resize=723%2C1024&ssl=1)
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಕಂಬ ಬಿದ್ದಿದ್ದು, ಕಂಬದೊಂದಿಗೆ ದೀವಿ ಹಲಸು ಮರದ ದೊಡ್ಡ ಗಾತ್ರದ ಕೊಂಬೆ ಬಿದ್ದಿತ್ತು. ಎಲ್ಲಾ ವಾಹನಗಳು ಅಗಲ ಕಿರಿದಾದ ಪಳಿಕೆ ರಸ್ತೆ ಯನ್ನು ಬಳಸಿ ಬೊಬ್ಬೆಕೇರಿ ಸಂಪರ್ಕ ರಸ್ತೆಯ ಮೂಲಕ ಸಂಚರಿಸಿದವು. ಎರಡೂ ಬದಿಗಳಲ್ಲಿ ವಾಹನಗಳು ಸಂಚರಿಸಿದ ಕಾರಣ ತಾಸುಗಟ್ಟಲೆ ಕಾಲ ಸಂಚಾರ ಸ್ಥಗಿತಗೊಂಡಿತ್ತು. ವಿಟ್ಲ ಪೊಲೀಸರು, ಸಾರ್ವಜನಿಕರ ಸಹಕಾರದೊಂದಿಗೆ ಸುಗಮ ಸಂಚಾರಕ್ಕೆ ಸಹಕರಿಸಿದರು. ಮೆಸ್ಕಾಂ ಸಿಬ್ಬಂದಿಗಳು ಸಕಾಲಿಕವಾಗಿ ಕಂಬ ತೆರವುಗೊಳಿಸಿದರು
Be the first to comment on "ವಿಟ್ಲ ಕಲ್ಲಡ್ಕ ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ: ಸಂಚಾರಕ್ಕೆಅಡಚಣೆ"