ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಮಂಗಳವಾರ ಬಿಸಿರೋಡು ಮೇಲು ಸೇತುವೆ ಕೆಳ ಭಾಗದಲ್ಲಿ ಪ್ರತಿಭಟನೆ ನಡೆಸಿತು.
ಸಂಘದ ಅಧ್ಯಕ್ಷರಾದ ಪ್ರಕಾಶ್ ಬಿ ಶೆಟ್ಟಿ ತುಂಬೆ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಲೆ ಏರಿಕೆ, ಪಠ್ಯಪುಸ್ತಕ ಪರಿಷ್ಕರಣೆಗಳ ಮೂಲಕ ಜನವಿರೋಧಿ ನೀತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿವೆ ಎಂದು ದೂರಿದರು.
ಸಂಘದ ಗೌರವಾಧ್ಯಕ್ಷರಾದ ಬಿ ಎಂ ಪ್ರಭಾಕರ ದೈವಗುಡ್ಡೆ, ಸಹಕಾರ್‍ಯದರ್ಶಿ ಸುರೆಶ್ ಕುಮಾರ್ ಬಂಟ್ವಾಳ್, ಪ್ರಧಾನ ಕಾರ್‍ಯದರ್ಶಿ ಬಿ.ಶೇಖರ್, ಪ್ರಮುಖರಾದ ರಾಮಣ್ಣ ವಿಟ್ಲ, ಬಿ.ಎಂ.ಅಬ್ಬಾಸ್ ಆಲಿ, ಉದಯಕುಮಾರ್, ಶಿವರಾಮ ಶೆಟ್ಟಿ, ಮೋಹನ ಅರಳ, ಕೇಶವ ನಾಯ್ಕ್ ಮತ್ತಿತರರು ಪ್ರತಿಭಟನೆಯಲ್ಲಿದ್ದು ಘೋಷಣೆ ಕೂಗಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…