ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ 8 ವರ್ಷ ಆಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ವಿಚಾರವನ್ನು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.
ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಜೂನ್ 15 ವರೆಗೆ ಕಾರ್ಯಕ್ರಮಗಳು ನಡೆಯಲಿವೆ 5ರಂದು ಬೆಳಗ್ಗೆ 11ಕ್ಕೆ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ರೈತರ ಸಮಾವೇಶ, ಮಧ್ಯಾಹ್ನ ಪರಿಶಿಷ್ಟ ಪಂಗಡ ಮೋರ್ಚಾದಿಂದ ಅವರ ಸಮುದಾಯ ನೀಡಿದ ಸೌಲಭ್ಯಗಳ ಕುರಿತ ಸಮಾವೇಶ, ಜೂ. 9ರಂದು ಮಹಿಳಾ ಸಮಾವೇಶ, ಜೂ. 14ರಂದು ಯುವ ಮೋರ್ಚಾದಿಂದ ವಿಕಾಸ ತೀರ್ಥ ಬೈಕ್ ಜಾಥಾ ನಡೆಯಲಿದೆ ಎಂದವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಕಾರ್ಯದರ್ಶಿಗಳಾದ ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಉಪಸ್ಥಿತರಿದ್ದರು.
Be the first to comment on "ಮೋದಿ ಆಡಳಿತಕ್ಕೆ 8 ವರ್ಷ: ಬಂಟ್ವಾಳ ಬಿಜೆಪಿಯಿಂದ ಸರಣಿ ಕಾರ್ಯಕ್ರಮ"