ಬಂಟ್ವಾಳ

ಮೋದಿ ಆಡಳಿತಕ್ಕೆ 8 ವರ್ಷ: ಬಂಟ್ವಾಳ ಬಿಜೆಪಿಯಿಂದ ಸರಣಿ ಕಾರ್ಯಕ್ರಮ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ 8 ವರ್ಷ ಆಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ವಿಚಾರವನ್ನು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ದೇವಪ್ಪ ಪೂಜಾರಿ ತಿಳಿಸಿದರು.

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಜೂನ್ 15 ವರೆಗೆ ಕಾರ್ಯಕ್ರಮಗಳು ನಡೆಯಲಿವೆ 5ರಂದು ಬೆಳಗ್ಗೆ 11ಕ್ಕೆ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ರೈತರ ಸಮಾವೇಶ, ಮಧ್ಯಾಹ್ನ ಪರಿಶಿಷ್ಟ ಪಂಗಡ ಮೋರ್ಚಾದಿಂದ ಅವರ ಸಮುದಾಯ ನೀಡಿದ ಸೌಲಭ್ಯಗಳ ಕುರಿತ ಸಮಾವೇಶ, ಜೂ. 9ರಂದು ಮಹಿಳಾ ಸಮಾವೇಶ, ಜೂ. 14ರಂದು ಯುವ ಮೋರ್ಚಾದಿಂದ ವಿಕಾಸ ತೀರ್ಥ ಬೈಕ್ ಜಾಥಾ ನಡೆಯಲಿದೆ ಎಂದವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಕಾರ್ಯದರ್ಶಿಗಳಾದ ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ