ಜಿಲ್ಲೆಯಲ್ಲಿ ಕೆ.ಪಿ.ಎಮ್.ಇ.ಎ ಕಾಯ್ದೆಯಡಿ ನೋಂದಣಿಯಾಗದ ಹಾಗೂ ನವೀಕರಣಗೊಳ್ಳದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜೂ.02ರ ಗುರುವಾರ ನಗರದ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ನಡೆದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆ 1994 ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಎಸ್ಟಾಬ್ಲಿμï ಮೆಂಟ್ ಕಾಯ್ದೆಯ ಅನುμÁ್ಠನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆ.ಪಿ.ಎಮ್.ಇ.ಎ ಕಾಯ್ದೆ ಮತ್ತು ಕಾನೂನು ಉಲ್ಲಂಘನೆ ಮಾಡುವ ಸೆಂಟರ್ ಗಳ ಸ್ಕ್ಯಾನಿಂಗ್ ಉಪಕರಣಗಳನ್ನು ವಶಪಡಿಸಿಕೊಂಡು ಅದನ್ನು ಮುಚ್ಚಬೇಕು, ಕೆ.ಪಿ.ಎಮ್.ಇ.ಎ ಅಡಿಯಲ್ಲಿ ನೋಂದಣಿಯಾಗದ ಮತ್ತು ನವೀಕರಣವಾಗದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು. ಪ್ರಯೋಗಾಲಯದ ಮಾದರಿ ಸಂಗ್ರಹ ಕೇಂದ್ರಗಳು ಕಡ್ಡಾಯವಾಗಿ ನೋಂದಣಿಯಾಗಬೇಕು, ನೋಂದಣಿಯಾಗದ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ತಾಕೀತು ಮಾಡಿದರು.
ಅಗ್ನಿ ಹಾಗೂ ವಿದ್ಯುತ್ ನಿಂದ ಯಾವುದೇ ರೀತಿಯ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳ ಬಗ್ಗೆ ಎಚ್ಚರ ವಹಿಸಬೇಕು, ಕಾಲಕಾಲಕ್ಕೆ ಅವುಗಳನ್ನು ಪರಿಶೀಲಿಸಬೇಕು, ನಿರ್ಲಕ್ಷಿಸುವ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಬೇಕು, ಹಳೆಯ ಖಾಸಗಿ ಆಸ್ಪತ್ರೆಗಳು ಅಗ್ನಿ ಅವಘಡಗಳಿಂದ ಸುರಕ್ಷತೆ ವಹಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದ ಅವರು, ಲಿಂಗಾನುಪಾತದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು, ಆಸಕ್ತ ಎನ್.ಜಿ.ಓಗಳು ಅಥವಾ ಸಂಘ-ಸಂಸ್ಥೆಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ಎಲ್ಲಾ ಗರ್ಭಿಣಿಯರಿಗೂ ತಾಯಿ ಕಾರ್ಡ್ ಕಡ್ಡಾಯವಾಗಿ ನೀಡಬೇಕು ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ಆನ್‍ಲೈನ್ ಮುಖಾಂತರ ಗರ್ಭಿಣಿಯರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕೆಂದು ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಹಾಗೂ ಅಧೀಕ್ಷಕ ಡಾ.ಶಾನುಭೋಗ, ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ.ವತ್ಸಲಾ ಕಾಮತ್ ಹಾಗೂ ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Be the first to comment on "ನೋಂದಣಿಯಾಗದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿ.ಪಂ. ಸಿಇಒ ಸೂಚನೆ"