ಬಂಟ್ವಾಳ

ಬದಿಗುಡ್ಡೆ ಉದಯ ಚೌಟ ಅವರಿಗೆ ಶ್ರದ್ಧಾಂಜಲಿ ಸಭೆ

ಬಂಟ್ವಾಳ: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತ ಬದಿಗುಡ್ಡೆ ದಿ. ಉದಯ ಚೌಟ ಅವರಿಗೆ ಶ್ರದ್ಧಾಂಜಲಿ ಸಭೆ ಬುಧವಾರ ಮಾಣಿಯ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಪುತ್ತೂರು ಕೋಟಿಚೆನ್ನಯ ಕಂಬಳ ಕೂಟದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಅವರೊಬ್ಬ ಉತ್ತಮ ಕ್ರೀಡಾ ಸಂಘಟಕ ಮತ್ತು ಕ್ರೀಡಾಕೂಟಗಳಲ್ಲಿ ಸಮಸ್ಯೆಗಳು ಎದುರಾದಾಗ ಚಾಕಚಕ್ಯತೆಯಿಂದ ನಿವಾರಿಸಬಲ್ಲ ಸಾಮರ್ಥ್ಯವುಳ್ಳವರಾಗಿದ್ದರು ಎಂದರು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈಯವರು ಅಧ್ಯಕ್ಷತೆ ವಹಿಸಿದ್ದರು.      ಕಲ್ಲಾಜೆಗುತ್ತು ಪ್ರಫುಲ್ಲ.ಆರ್.ರೈ, ಜಡ್ತಿಲ ಪ್ರಹ್ಲಾದ ಶೆಟ್ಟಿ, ಮೋಹನ ಪೈ ಮಾಣಿ, ಸುರೇಶ್ ಪೂಜಾರಿ ಸೂರ್ಯ, ಜಗನ್ನಾಥ ಚೌಟ ಬದಿಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮಂದಿ ಗಣ್ಯರು ದಿ.ಉದಯ ಚೌಟರವರಿಗೆ ನುಡಿನಮನದ ಮೂಲಕ ಸಂತಾಪ ವ್ಯಕ್ತಪಡಿಸಿದರು.  ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts