ಬಂಟ್ವಾಳ: ಬಿ.ಸಿ.ರೋಡಿನ ಆಡಳಿತ ಸೌಧ ಮುಂಭಾಗ ಸಸಿ ನೆಡುವ ಮೂಲಕ ಕಂದಾಯ ಇಲಾಖೆ ವತಿಯಿಂದ ಪರಿಸರ ದಿನವನ್ನು ಆಚರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮಕ್ಕೆ ಬಂಟ್ವಾಳ ತಹಸೀಲ್ದಾರ್ ಡಾ.ಸ್ಮಿತಾ ರಾಮು ಚಾಲನೆ ನೀಡಿ ಪ್ರತಿಯೊಬ್ಬರ ಆರೋಗ್ಯ ಮತ್ತು ಜೀವನಕ್ಕೆ ಪರಿಶುದ್ಧವಾದ ಗಾಳಿ ಅಗತ್ಯ ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಕಾಳಜಿ ಮೂಡಬೇಕು ಪರಿಸರ ನಾಶ ಮಾಡದೆ ಉತ್ತಮ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಕಾಳಜಿ ವಹಿಸಬೇಕಿದೆ ಎಂದರು. ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…