ಬಂಟ್ವಾಳ: ಪರಿಸರದಿಂದ ಬದುಕಿಗೆ ಪಾಠ ದೊರಕುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಪರಿಸರದಲ್ಲಿ ಹನುಮಫಲ ಮತ್ತು ಲಕ್ಷ್ಮಣ ಫಲಗಳ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯ ಸಂದೇಶ ನೀಡಿದರು.
ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಸೇರಾಜೆ ಗಣಪತಿ ಭಟ್, ಮುಖ್ಯೋಪಾಧ್ಯಾಯಿನಿ ರೇಣುಕಾ ಎಸ್.ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಪಿ. ಲಿಂಗಪ್ಪ ಗೌಡ, ಒಡಿಯೂರುದ ತುಳುಕೂಟದ ಅಧ್ಯಕ್ಷ ಯಶವಂತ ವಿಟ್ಲ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ, ಯೋಜನೆಯ ಬಂಟ್ವಾಳ ತಾಲೂಕಿನ ಸಂಯೋಜಕಿಯರು, ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹಾಗೂ ಸದಸ್ಯರು, ಶ್ರೀ ಸಂಸ್ಥಾನ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಸದಸ್ಯೆಯರು ಭಾಗವಹಿಸಿದ್ದರು.