ಬಂಟ್ವಾಳ: ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಹಿತ ವಿವಿಧ ಸಂಘಟನೆಗಳ ಸಹಕಾರದಲ್ಲಿ 1540ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಲಯನ್ಸ್ ಕ್ಲಬ್ ಬಂಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಹಾಗೂ ಇತರ ಸಂಸ್ಥೆಗಳ ಸಹಯೋಗದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಬೆಳ್ತಂಗಡಿ ವಿಸ್ತರಣ ಕಾರ್ಯಕ್ರಮದ ಅಂಗವಾಗಿ ಆರಂಭಗೊಂಡಿರುವ ಶಿಬಿರ ಜೂ.14ರ ಮಂಗಳವಾರದವರೆಗೆ ನಡೆಯಲಿದೆ.
ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಐತಪ್ಪ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾನಮುಕ್ತರಾಗಿ ಮುಂದಿನ ಜೀವನ ಸಾಗಿಸಲು ಯೋಜನೆಯ ಈ ಕಾರ್ಯಕ್ರಮ ಸಹಕಾರಿ ಎಂದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಮನುಷ್ಯನ ಒಳಿತು ಕೆಡುಕುಗಳು ತನ್ನ ವರ್ತನೆಯಿಂದಲೇ ಆಗುತ್ತದೆ, ಮದ್ಯಪಾನದಿಂದ ಯಾರೂ ಉದ್ಧಾರವಾಗಿಲ್ಲ ಎಂದರು.
ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಡಾ. ವಸಂತ ಬಾಳಿಗ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಜನಜಾಗೃತಿ ವೇದಿಕೆ ಪೂರ್ವಾಧ್ಯಕ್ಷರಾದ ರುಕ್ಮಯ ಪೂಜಾರಿ, ಕೆಯ್ಯೂರು ನಾರಾಯಣ ಭಟ್ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜಾ, ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಯೋಜನಾಧಿಕಾರಿ ಜಯಾನಂದ, ಜನಜಾಗೃತಿ ವೇದಿಕೆ ಪ್ರಮುಖರಾದ ದೇವಪ್ಪ ಕುಲಾಲ್, ಮಹಮ್ಮದ್ ನಂದಾವರ, ಶ್ರೀನಿವಾಸ ಪೂಜಾರಿ, ಜಗದೀಶ ಕೊಯ್ಲ, ಸದಾನಂದ ಶೀತಲ್, ಪ್ರವೀಣ್ ಆಳ್ವ, ಹರೀಶ್ ಕುದನೆ, ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಕಕೀರ್ತಿ ಇಂದ್ರ ಉಪಸ್ಥಿತರಿದ್ದರು.ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿದರು. ಶಿಬಿರ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಾಣೆಮಂಗಳೂರು ಮೇಲ್ವಿಚಾರಕಿ ಅಮಿತಾ ವಂದಿಸಿದರು. ಸಿದ್ಧಕಟ್ಟೆ ಮೇಲ್ವಿಚಾರಕ ಶಿವರಂಜನ್ ಕಾರ್ಯಕ್ರಮ ನಿರೂಪಿಸಿದರು.