ಬಂಟ್ವಾಳ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಥಿಂಕ್ ಗ್ರೀನ್, ರಿಸ್ಟೋರ್ ಇಕೊಸಿಸ್ಟಮ್ ಅಭಿಯಾನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆಯಿತು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ, ಯುವಜನತೆಯಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿ ಜ್ಞಾನೇಶ್ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು. ಅಭಿಯಾನದಲ್ಲಿ ವಿಚಾರ ಸಂಕಿರಣ, ಗಿಡ ನೆಡುವುದು,ರೈತರೊಂದಿಗೆ ಸೆಲ್ಫಿ, ಜಾಗೃತಿ ಕಾರ್ಯಕ್ರಮಗಳು, ಸಾರ್ವಜನಿಕ ಸಂಪರ್ಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ. ಕ್ಯಾಂಪಸ್ ಫ್ರಂಟ್ ಬಂಟ್ವಾಳ ತಾಲೂಕು ಕಾರ್ಯದರ್ಶಿ ಹಫಾಜ್ , ಕೋಶಾಧಿಕಾರಿ ಶಾಹೀಮ್ ಹಾಗೂ ಸಮಿತಿ ಸದಸ್ಯ ಯಾಸೀನ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…