ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ವಿದ್ಯಾರ್ಥಿಗಳಾದ ಅಬ್ದುಲ್ ಖಾದರ್ ಮುಶೀನ್ ಮತ್ತು ಶಾಹುಲ್ ಅಹ್ಮದ್ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಈಗಾಗಲೇ ಕ್ರೀಡೆಯಲ್ಲಿ ವಿಶೇಷ ಪ್ರತಿಭಾನ್ವಿತರಾಗಿರುವ ಇವರು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ರಾಜೇಶ್ ಮಾರ್ಗದರ್ಶನ ನೀಡಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ"