ಸಾಧಕರು

ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ವಿದ್ಯಾರ್ಥಿಗಳಾದ ಅಬ್ದುಲ್ ಖಾದರ್ ಮುಶೀನ್ ಮತ್ತು ಶಾಹುಲ್ ಅಹ್ಮದ್  ಭಾಗವಹಿಸಿ  ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಈಗಾಗಲೇ ಕ್ರೀಡೆಯಲ್ಲಿ ವಿಶೇಷ ಪ್ರತಿಭಾನ್ವಿತರಾಗಿರುವ ಇವರು  ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ರಾಜೇಶ್ ಮಾರ್ಗದರ್ಶನ ನೀಡಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ