ಬಂಟ್ವಾಳ: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಾಧಕರಿಗೆ ಪರಾರಿ ಎಂಬಲ್ಲಿರುವ ಶ್ರೀ ಭೈರವ ಸಂಘದಿಂದ ಸನ್ಮಾನಿಸಲಾಯಿತು. ಭೂಮಿಕಾ, ಮತ್ತು ಶ್ರೇಯಸ್ ಅವರಿಗೆ, ಶ್ರೀ ಭೈರವ ಸಂಘ ಪರಾರಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ಸಂಘದ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಗಣೇಶ್ ಹಾಗೂ ಇತರ ಪದಾದಿಕಾರಿಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಫಲಪುಷ್ಪ ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಗಣ್ಯರಾದ ಮನೋಹರ ಶೆಟ್ಟಿ, ವೇದನಾಥ ಶೆಟ್ಟಿ, ನಾಗೇಶ ಕಿರೋಡಿಯನ್, ಉಮೇಶ ಮೂಲ್ಯ, ವಿದ್ಯಾರ್ಥಿಗಳ ಪೋಷಕರು ಹಾಗೂ ಇತರರು ಉಪಸ್ಥಿತರಿದ್ದರು. ಉಮೇಶ್ ಸ್ವಾಗತಿಸಿದರು. ಅವಿಲ್ ವಂದಿಸಿದರು. ಗಣೇಶ ಕಾರ್ಯಕ್ರಮ ನಿರೂಪಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…