ಕಸಾಪ ತಿಂಗಳ ಬೆಳಕು: ಬಂಟ್ವಾಳ ಕನ್ನಡ ಭವನದಲ್ಲಿ ತಾಳಮದ್ದಳೆ

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ ಕಸಾಪ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆಯುವ ತಿಂಗಳ ಬೆಳಕು ಕಾರ್ಯಕ್ರಮ ಅಂಗವಾಗಿ ಶನಿವಾರ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕಿ ಸುಜಾತಾಕುಮಾರಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ತಾಳಮದ್ದಳೆಯಲ್ಲಿ ದೊರಕುವ ಪೌರಾಣಿಕ ವಿಚಾರಧಾರೆಯನ್ನು ಅರಿತುಕೊಳ್ಳುವುದು ಮಹತ್ವದ್ದಾಗಿದ್ದು, ಯುವ ಪೀಳಿಗೆ ಯಕ್ಷಗಾನದತ್ತ ಆಕರ್ಷಿತರಾಗಿದ್ದು, ತಾಳಮದ್ದಳೆಯಂಥ ಕಾರ್ಯಕ್ರಮ ಆಸ್ವಾದಿಸುವ ಮೂಲಕ ಜ್ಞಾನಸಂಪಾದನೆಯನ್ನು ಹೊಂದಬಹುದು ಎಂದರು.

ಪ್ರಾಯೋಜಕರಾದ ಭೂಮಾಪನಾ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಆನಂದ ಕುಮಾರ್,  ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ್ ಉಪಸ್ಥಿತರಿದ್ದರು. ಗೀತಾ ಎಸ್.ಕೊಂಕೋಡಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

ಬಳಿಕ ಸುಧನ್ವ ಮೋಕ್ಷ ಪ್ರಸಂಗವನ್ನು ಪುತ್ತೂರು ಧೀಶಕ್ತಿ ಮಹಿಳಾ ಯಕ್ಷಬಳಗ ತಂಡ ಪ್ರಸ್ತುತಪಡಿಸಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕಾವ್ಯಶ್ರೀ ಆಜೇರು, ಮದ್ದಲೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಚೆಂಡೆಯಲ್ಲಿ ಶ್ರೀಪತಿ ನಾಯಕ್ ಆಜೇರು, ಮುಮ್ಮೇಳದಲ್ಲಿ ಸುಧನ್ವನಾಗಿ ಪದ್ಮಾ ಕೆ.ಆರ್.ಆಚಾರ್ಯ, ಅರ್ಜುನನಾಗಿ ಜಯಲಕ್ಷ್ಮೀ ವಿ.ಭಟ್, ಶ್ರೀಕೃಷ್ಣನಾಗಿ ಪ್ರೇಮಾ ಕಿಶೋರ್, ಪ್ರಭಾವತಿಯಾಗಿ ಶುಭಾ ಆಚಾರ್ಯ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಸಾಪ ತಿಂಗಳ ಬೆಳಕು: ಬಂಟ್ವಾಳ ಕನ್ನಡ ಭವನದಲ್ಲಿ ತಾಳಮದ್ದಳೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*