ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಯುವ ಮೋರ್ಚಾದ ವಿಕಾಸ ತೀರ್ಥ ಬೈಕ್ ರಾಲಿಯ ಜಿಲ್ಲಾ ಮಟ್ಟದ ಕಾರ್ಯಕ್ರಮದ ಸಮಾರೋಪ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇಡೀ ರಾಜ್ಯದಲ್ಲಿ ಯುವ ಮೋರ್ಚಾವು ಸಂಘಟಿತ ಶಕ್ತಿಯಾಗಿ ಕೆಲಸ ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ, ಕಾಂಗ್ರೆಸ್ ನ ಪ್ರಮುಖರೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ವಿಶ್ವಮಾನ್ಯತೆಯನ್ನು ಪಡೆಯುತ್ತಿದ್ದಾರೆ ಎಂದರು.
ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಯುವ ಮೋರ್ಚಾ ಪ್ರಭಾರಿ ಸತೀಶ್ ಕುಂಪಲ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಕುಮಾರಿ, ವಿಧಾನ ಮಂಡಲಗಳ ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ ಬೆಳಾಲು, ಭರತ್‌ರಾಜ್ ಕೃಷ್ಣಾಪುರ, ಸಚಿನ್‌ರಾಜ್ ರೈ, ಸಚಿನ್ ಮೋರೆ, ಸಚಿನ್ ಶೆಣೈ, ನವೀನ್, ಕೃಷ್ಣ ಎಂ.ಆರ್., ಅಶ್ವಥ್ ಪಣಪಿಲ ವೇದಿಕೆಯಲ್ಲಿದ್ದರು. ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿ, ಮತ್ತೋರ್ವ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಮಾರ್ನಾಡ್ ವಂದಿಸಿದರು. ಯತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Be the first to comment on "ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ವಿಕಾಸ ತೀರ್ಥ ಜಾಥಾ ಸಮಾಪನ: ರಾಜ್ಯದಲ್ಲಿ 150 ಸ್ಥಾನದೊಂದಿಗೆ ಮತ್ತೆ ಅಧಿಕಾರಕ್ಕೆ – ನಳಿನ್"