ಬಂಟ್ವಾಳ: ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಜನಕಲ್ಯಾಣ ಸಮಾವೇಶ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಶುಭ ಹಾರೈಸಿದರು. ಬಂಟ್ವಾಳ ಎಸ್.ಟಿ.ಮೋರ್ಚಾದ ಅಧ್ಯಕ್ಷರಾದ ರಾಮನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಎಸ್ ಟಿ ಮೋರ್ಚಾದ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ, ಬಿಜೆಪಿ ಸರ್ಕಾರಗಳು ಎಸ್.ಟಿ.ಯವರ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳು ಸಮಾಜಕ್ಕೆ ಶಕ್ತಿ ತುಂಬಿದೆ ಎಂದರು.
ಎಸ್ ಟಿ ಮೋರ್ಚಾದ ಪ್ರಭಾರಿ ಜಯಶ್ರೀ ಕರ್ಕೇರ ಮಾತನಾಡಿ, ಈ ಹಿಂದಿನ ಯಾವುದೇ ಸರ್ಕಾರಗಳು ಎಸ್.ಟಿ. ಸಮುದಾಯ ಕ್ಕೆ ನೀಡದಷ್ಟು ಯೋಜನೆಗಳನ್ನು ಈಗಿನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿವೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಎಸ್.ಟಿ.ಮೋರ್ಚಾದ ಅಧ್ಯಕ್ಷ ಚೆನ್ನಕೇಶವ ಅರಸಮಜಲು, ರಾಮದಾಸ್ ಬಂಟ್ವಾಳ, ಸುಲೋಚನಾ ಜಿ.ಕೆ.ಭಟ್, ಸುಮಿತ್ರಾ ಕರಾಯ. ಜಯರಾಮ ನಾಯ್ಕ್ ಕುಂಟ್ರಕಳ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಜನಕಲ್ಯಾಣ ಸಮಾವೇಶ"