ಬಂಟ್ವಾಳ

ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಜನಕಲ್ಯಾಣ ಸಮಾವೇಶ

ಬಂಟ್ವಾಳ: ಬಿಜೆಪಿ ಎಸ್.ಟಿ. ಮೋರ್ಚಾ ವತಿಯಿಂದ ಜನಕಲ್ಯಾಣ ಸಮಾವೇಶ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಶುಭ ಹಾರೈಸಿದರು. ಬಂಟ್ವಾಳ‌ ಎಸ್.ಟಿ.ಮೋರ್ಚಾದ ಅಧ್ಯಕ್ಷರಾದ ರಾಮನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಎಸ್ ಟಿ ಮೋರ್ಚಾದ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ, ಬಿಜೆಪಿ‌ ಸರ್ಕಾರಗಳು ಎಸ್.ಟಿ.ಯವರ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳು ಸಮಾಜಕ್ಕೆ ಶಕ್ತಿ ತುಂಬಿದೆ ಎಂದರು.

ಎಸ್ ಟಿ ಮೋರ್ಚಾದ  ಪ್ರಭಾರಿ ಜಯಶ್ರೀ ಕರ್ಕೇರ ಮಾತನಾಡಿ, ಈ ಹಿಂದಿನ ಯಾವುದೇ ಸರ್ಕಾರಗಳು ಎಸ್.ಟಿ. ಸಮುದಾಯ ಕ್ಕೆ ನೀಡದಷ್ಟು ಯೋಜನೆಗಳನ್ನು ಈಗಿನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿವೆ ಎಂದರು.

ಜಾಹೀರಾತು

 ಜಿಲ್ಲಾ‌ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಂಟ್ವಾಳ ಮಂಡಲ‌ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಎಸ್.ಟಿ.ಮೋರ್ಚಾದ ಅಧ್ಯಕ್ಷ  ‌ಚೆನ್ನಕೇಶವ ಅರಸಮಜಲು, ರಾಮದಾಸ್ ಬಂಟ್ವಾಳ, ಸುಲೋಚನಾ ಜಿ.ಕೆ.ಭಟ್, ಸುಮಿತ್ರಾ ಕರಾಯ. ಜಯರಾಮ ನಾಯ್ಕ್ ಕುಂಟ್ರಕಳ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ