ಬಂಟ್ವಾಳ: ರಸ್ತೆ ಬದಿ ತ್ಯಾಜ್ಯ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕುವ ಕುರಿತು ಹಲವು ಗ್ರಾಪಂಗಳು ತಲೆಕೆಡಿಸಿಕೊಂಡಿದ್ದರೆ, ಇಲ್ಲೊಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಸ ಹಾಕಿದವರ ಬಳಿಯಿಂದಲೇ ಕಸ ತೆಗೆಸಿ ಐದು ಸಾವಿರ ರೂ ದಂಡ ವಿಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕುರಿಯಾಳ ಪಡು ಎಂಬಲ್ಲಿ ರಸ್ತೆ ಬದಿ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ರಾತ್ರಿ ವೇಳೆ ಕಸ ಎಸೆದಿದ್ದರು. ಇದನ್ನು ಪತ್ತೆಹಚ್ಚಿದ ಪಿಡಿಒ ರವಿ. ಬಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಸಿಬ್ಬಂದಿ ಚೇತನ್ ಮತ್ತು ಇತರ ಸಿಬ್ಬಂದಿ ಎಸೆದ ವ್ಯಕ್ತಿಯನ್ನು ಕರೆಸಿ, ಅವರಿಂದಲೇ ಕಸ ತೆಗೆಸಿ, ಐದು ಸಾವಿರ ರೂ ದಂಡ ವಿಧಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…