ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ವತಿಯಿಂದ ಕಾರ್ಯಕ್ರಮ
ಬಂಟ್ವಾಳ: ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ವತಿಯಿಂದದ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ವಿಶ್ವಭಾರತಿ ಸಪ್ತ ಸಾಪ್ತಾಹಿಕ ಕೂಟ ಸರಣಿ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಜೂನ್ 18ರಿಂದ ಜುಲೈ 29ರವರೆಗೆ ಪ್ರತಿ ಶನಿವಾರ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ನಡೆಯುವ ಸರಣಿ ತಾಳಮದ್ದಳೆ ಕಾರ್ಯಕ್ರಮವನ್ನು 18ರಂದು ಮಧ್ಯಾಹ್ನ 2.30ಕ್ಕೆ ಕೃಷ್ಣಕುಮಾರ್ ಸೋಮಯಾಜಿ ದೀಪ ಪ್ರಜ್ವಲನಗೈದು ಉದ್ಘಾಟಿಸುವರು. ಈ ಸಂದರ್ಭ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಉಪಸ್ಥಿತರಿರುವರು. ಕರ್ಮಬಂಧನ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದ್ದು, ಹಿಮ್ಮೇಳದಲ್ಲಿ ವಿದ್ಯಾ ಐತಾಳ್, ರಾಮ ಹೊಳ್ಳ ಸುರತ್ಕಲ್, ಅದ್ವೈತ್ ಕನ್ಯಾನ, ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್, ಪ್ರಶಾಂತ್ ಹೊಳ್ಳ, ಕುಶಲ ಮುಡಿಪು ಭಾಗವಹಿಸುವರು ಎಂದು ವಿಶ್ವಭಾರತಿ ಸಂಚಾಲಕ ಪ್ರಶಾಂತ್ ಹೊಳ್ಳ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜೂನ್ 18ರಿಂದ ಜುಲೈ 29ರವರೆಗೆ ಪ್ರತಿ ಶನಿವಾರ ಕನ್ನಡ ಭವನದಲ್ಲಿ ತಾಳಮದ್ದಳೆ"
Be the first to comment on "ಜೂನ್ 18ರಿಂದ ಜುಲೈ 29ರವರೆಗೆ ಪ್ರತಿ ಶನಿವಾರ ಕನ್ನಡ ಭವನದಲ್ಲಿ ತಾಳಮದ್ದಳೆ"