ಬಂಟ್ವಾಳ: ಕಣ್ಣಿನ ಮೂಲಕ ಜಗತ್ತನ್ನು ನೋಡುವ ಸೌಭಾಗ್ಯ ನಮ್ಮದು.ಆ ನಿಟ್ಟಿನಲ್ಲಿ ಜೇಸಿಐ ಶಿಬಿರವನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ. ಎಂದು ಮೊಗರ್ನಾಡು ಶ್ರೀ ಲಕ್ಷ್ಮಿ ನರಸಿಂಹ ದೇವಾಲಯದ ಮೊಕ್ತೇಸರರಾದ ವೇದಮೂರ್ತಿ ಜನಾರ್ದನ ಭಟ್ ಹೇಳಿದರು.
ಜೇಸಿಐ ಜೋಡುಮಾರ್ಗ ನೇತ್ರಾವತಿ, ವಿಜಯಶ್ರೀ ಚಿಕಿತ್ಸಾಲಯ ಮೊಗರ್ನಾಡು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಸೆಂಚುರಿ ಗ್ರೂಪ್ ಬೆಂಗಳೂರು ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗು ನೇತ್ರದಾನ ನೋಂದಾವಣೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಾರ್ವಜನಿಕರಿಗೆ ಉಪಯುಕ್ತವಾದಂತಹ ಇಂತಹ ಕೆಲಸ ಕಾರ್ಯಗಳ ಪ್ರಯೋಜನ ಎಲ್ಲರಿಗೂ ದೊರಕುವಂತಾಗಲಿ ಎಂದವರು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಜೇಸಿ ವಲಯ ಅಭಿವೃದ್ದಿ ವಿಭಾಗದ ನಿರ್ದೇಶಕ ಜೇಸಿ ಪುರುಷೋತ್ತಮ ಶೆಟ್ಟಿ ಜೇಸಿಐ ವ್ಯಕ್ತಿತ್ವ ವಿಕಸನ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಂಸ್ಥೆಯಾಗಿದೆ ಎಂದರು. ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾದ ಹರಿಪ್ರಸಾದ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.
ವಿಜಯಶ್ರೀ ಚಿಕಿತ್ಸಾಲಯದ ಡಾ. ಸುಬ್ರಹ್ಮಣ್ಯ ಭಟ್, ಪ್ರಸಾದ್ ನೇತ್ರಾಲಯದ ಡಾ. ದಿಶಾ ಉಪಸ್ಥಿತರಿದ್ದರು. ಜೆಸಿಐ ಕಾರ್ಯದರ್ಶಿ ಕಿಶನ್ ಎನ್ ರಾವ್ ಸ್ವಾಗತಿಸಿ, ವಂದಿಸಿದರು. ಶಿಬಿರದಲ್ಲಿ 148 ಮಂದಿಯ ನೇತ್ರ ತಪಾಸಣೆ ನಡೆಸಿ ಅರ್ಹರಿಗೆ ಶಸ್ತ್ರಚಿಕಿತ್ಸೆ ಹಾಗು ರಿಯಾಯತಿ ದರದ ಕನ್ನಡಕ ನೀಡಲಾಯಿತು. ಇದೇ ಸಂದರ್ಭದಲ್ಲಿ ಝಂಡು ಹಿಮಾಮಿ ಕಂಪನಿ ವತಿಯಿಂದ ಉಚಿತ ಮಧುಮೇಹ ತಪಾಸಣೆ ನಡೆಸಲಾಯಿತು.
Be the first to comment on "ಜೋಡುಮಾರ್ಗ ಜೇಸಿ ಸಹಿತ ಸಂಘ ಸಂಸ್ಥೆಗಳಿಂದ ಉಚಿತ ನೇತ್ರ ತಪಾಸಣೆ"