ಮಾಣಿ ಗ್ರಾಮ ಪಂಚಾಯಿತಿ ಪ್ರಥಮ ಸುತ್ತಿನ ಗ್ರಾಮಸಭೆ

ಬಂಟ್ವಾಳ : ಮಾಣಿ ಗ್ರಾಮ ಪಂಚಾಯಿತಿ ಪ್ರಥಮ ಸುತ್ತಿನ ಗ್ರಾಮಸಭೆ ಮಾಣಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಗ್ರಾಮದ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಈ ಸಂದರ್ಭ ಅಧ್ಯಕ್ಷತೆ ವಹಿಸಿ ಹೇಳಿದರು. ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ದಿನೇಶ್ ರವರು ಮಾತನಾಡಿ, ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಮಾಣಿ ಗ್ರಾಮ ಪಂಚಾಯತ್ತಿನ ಆಡಳಿತ ವೈಖರಿಯೇ ಉತ್ತಮ ಉದಾಹರಣೆ ಎಂದರು. ವಿವಿಧ ಇಲಾಖೆಗಳಿಂದ ಆಗಮಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಹಲವು ಮಾಹಿತಿಗಳನ್ನು ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಕಳೆದ ಅವಧಿಯ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಿದರು.  ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ, ಮಿತ್ರಾಕ್ಷಿ  ಉಪಸ್ಥಿತರಿದ್ದರು.  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ ವಂದಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮಾಣಿ ಗ್ರಾಮ ಪಂಚಾಯಿತಿ ಪ್ರಥಮ ಸುತ್ತಿನ ಗ್ರಾಮಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*