ಬಂಟ್ವಾಳ : ಮಾಣಿ ಗ್ರಾಮ ಪಂಚಾಯಿತಿ ಪ್ರಥಮ ಸುತ್ತಿನ ಗ್ರಾಮಸಭೆ ಮಾಣಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಗ್ರಾಮದ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಈ ಸಂದರ್ಭ ಅಧ್ಯಕ್ಷತೆ ವಹಿಸಿ ಹೇಳಿದರು. ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ದಿನೇಶ್ ರವರು ಮಾತನಾಡಿ, ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಮಾಣಿ ಗ್ರಾಮ ಪಂಚಾಯತ್ತಿನ ಆಡಳಿತ ವೈಖರಿಯೇ ಉತ್ತಮ ಉದಾಹರಣೆ ಎಂದರು. ವಿವಿಧ ಇಲಾಖೆಗಳಿಂದ ಆಗಮಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಹಲವು ಮಾಹಿತಿಗಳನ್ನು ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಕಳೆದ ಅವಧಿಯ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ, ಮಿತ್ರಾಕ್ಷಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ ವಂದಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…