ಕಲ್ಲಡ್ಕ

ವೀರಕಂಭ ಗ್ರಾಮದ ಪ್ರಥಮ ಸುತ್ತಿನ ಗ್ರಾಮಸಭೆ

ಬಂಟ್ವಾಳ: ವೀರಕಂಭ ಗ್ರಾಮದ ಪ್ರಥಮ ಸುತ್ತಿನ ಗ್ರಾಮಸಭೆ ಮಜಿ ವೀರಕಂಭ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ದಿನೇಶ್ ವಹಿಸಿದ್ದರು.

ಗ್ರಾಮಸಭೆಯ ಮಾರ್ಗದರ್ಶಿ ಅದಿಕಾರಿಯಾಗಿ ಪಶು ಸಂಗೋಪನ ಇಲಾಖೆ ಬಂಟ್ವಾಳ ಸಹಾಯಕ ನಿರ್ದೇಶಕರಾದ ಡಾ. ಹರೀಶ್ ಭಾಗವಹಿಸಿದ್ದು ಗ್ರಾಮಸಭೆಗೆ ವಿವಿಧ ಇಲಾಖೆ ಗಳಾದ , ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ತೋಟಗಾರಿಕಾ ಇಲಾಖೆ,  ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು  ಭಾಗವಹಿಸಿದ್ದರು.

ಉಪಾಧ್ಯಕ್ಷೆ ಶೀಲಾ ನಿರ್ಮಲ ವೇಗಸ್, ಪಂಚಾಯತ್ ಸದಸ್ಯರಾದ ಜನಾರ್ಧನ ಪೂಜಾರಿ ,ರಘು ಪೂಜಾರಿ, ನಿಶಾಂತ್ ರೈ ,ಜಯಪ್ರಸಾದ್, ಸಂದೀಪ್, ಜಯಂತಿ, ಮೀನಾಕ್ಷಿ ,ಗೀತಾ ,. ಲಲಿತಾ ಉಪಸ್ಥಿತರಿದ್ದರು,  ಗ್ರಾಮಸಭೆಯಲ್ಲಿ ಗ್ರಾಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಕಿರಿಯ ಆರೋಗ್ಯ ಸಂರಕ್ಷಣಾಧಿಕಾರಿಗಳು  ಗ್ರಾಮಸ್ಥರು ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಬಿ ಆರ್ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts