ಬಂಟ್ವಾಳ

ಬಂಟ್ವಾಳದಲ್ಲಿ 2 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಣೆ

ಬಂಟ್ವಾಳ: ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ರಾಜೀವ ಗಾಂಧಿ , ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 2021-22 ನೇ ಸಾಲಿನ ಬಸವ ವಸತಿ ಹಾಗೂ ಡಾ.ಬಿ‌ಆರ್.ಅಂಬೇಡ್ಕರ್ ವಸತಿ ಯೋಜನೆಯ 2060 ಫಲಾನುಭವಿಗಳಿಗೆ ಕಾರ್ಯದೇಶ, 94ಸಿ, 94 ಸಿಸಿ ಹಕ್ಕು ಪತ್ರ, ಪಾಕೃತಿಕ ವಿಕೋಪ ದ ಚೆಕ್, ವಿಕಲಚೇತನರಿಗೆ ಸಾಧನಾ ಸಲಕರಣೆ ಯ ವಿತರಣಾ ಸಮಾರಂಭ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ ನಡೆಯಿತು.

ಕುಮ್ಕಿ ಹಕ್ಕಿನ ಸಮಸ್ಯೆ ಪರಿಹಾರಕ್ಕೆ ಸರಕಾರ ಬದ್ದವಾಗಿದ್ದು, ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ದವಾಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

55 ಕೋಟಿ ವೆಚ್ಚದಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಯುಜಿಡಿ ಯೋಜನೆ ಅನುಷ್ಠಾನ,ಪುಂಜಾಲಕಟ್ಟೆ ಆಸ್ಪತ್ರೆಯನ್ನು 10 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸುವ ಕೆಲಸ ಮಾಡಲಾಗಿದ್ದು. ಬಂಟ್ವಾಳ ಕ್ಷೇತ್ರದಾದ್ಯಂತ ಸಾವಿರಾರು ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ನಡೆದಿದೆ, ಇದಕ್ಕೆಲ್ಲ ಶಾಸಕ ರಾಜೇಶ್ ನಾಯ್ಕ್ ಅವರ ಕ್ರಿಯಾಶೀಲತೆ ಕಾರಣ ಎಂದು ಈ ಸಂದರ್ಭ ಸಂಸದರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ ,ಕಾರ್ಯಕ್ಕೆ ಸಹಕಾರ ನೀಡಿದ ತಾಲೂಕಿನ ತಹಶೀಲ್ದಾರ್,ಉಪತಹಶೀಲ್ದಾರ್,  ತಾ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ,  ಗ್ರಾಮ ಕರಣೀಕರು, ಸಿಡಿಪಿಒ,ಪಿಡಿಒ, ಕಾರ್ಯದರ್ಶಿ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದ ನೀಡಿ, ಅಭಿವೃದ್ಧಿ ಜೊತೆಗೆ ಶಾಂತಿಯುತ ನವ ಬಂಟ್ವಾಳ ನಿರ್ಮಾಣಕ್ಕೆ ಎಲ್ಲರ ಸಹಕಾರ ಬೇಕು ಎಂದು ಅವರು ಹೇಳಿದರು

ಕಿಯೋನಿಕ್ಸ್ ಅಧ್ಯಕ್ಷ  ಹರಿಕೃಷ್ಣ ಬಂಟ್ವಾಳ,  ಬಂಟ್ವಾಳ ತಹಸೀಲ್ದಾರ್ ಡಾ.ಸ್ಮಿತಾ ರಾಮು, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ, ಜಿಲ್ಲಾ ನೊಡೆಲ್ ಅಧಿಕಾರಿ ಸವಿತಾ ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ