ಕದ್ದ ದನ ಕಡಿದು ಮಾಂಸ ಮಾರಾಟ: ಇಬ್ಬರ ಬಂಧನ

ಬಂಟ್ವಾಳ: ಕದ್ದ ದನಗಳನ್ನು ಮಾಂಸ ಮಾಡಿ ಮಾರಿದ ಆರೋಪದಲ್ಲಿ ತಂದೆ, ಮಗನನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಗೋಳ್ತಮಜಲು ಗ್ರಾಮದ ಮದಕ ಎಂಬಲ್ಲಿ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಇಸ್ಮಾಯಿಲ್ (47) ಮತ್ತು ಆತನ ಮಗ ಸಾಬಿತ್ ಹುಸೈನ್ (18) ಬಂಧಿತ ಆರೋಪಿಗಳು. ಗೋಳ್ತಮಜಲು ಮಹಮ್ಮದ್ ಎಂಬವರ ಮನೆಯಲ್ಲಿ ಕದ್ದು ತಂದ ದನಗಳನ್ನು ವದೆ ಮಾಡಿ ಬಳಿಕ, ಮಾಂಸ ಮಾರಾಟ ಮಾಡಲಾಗುತ್ತಿತ್ತು  ಎಂಬ ಖಚಿತ ಮಾಹಿತಿಯಂತೆ ಬಂಟ್ವಾಳ ನಗರ ಠಾಣಾ ಎಸ್ ‌ಐ.ಅವಿನಾಶ್ ನೇತೃತ್ವದ ನಗರ ಠಾಣಾ ಪೊಲೀಸರ ತಂಡ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳು ಬಂಧಿಸಿತು. ದಾಳಿಯ ವೇಳೆ ಅಂದಾಜು 21 ಸಾವಿರ ರೂಪಾಯಿಯ 80 ಕೆಜಿ ದನದ ಮಾಂಸ ಹಾಗೂ ಸುಮಾರು 4,500 ರೂಗಳನ್ನು ವಶಪಡಿಸಿಕೊಳ್ಳಲಾಯಿತು.  ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕದ್ದ ದನ ಕಡಿದು ಮಾಂಸ ಮಾರಾಟ: ಇಬ್ಬರ ಬಂಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*