ಕಲ್ಲಡ್ಕ

ಶನಿವಾರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕಲ್ಲಡ್ಕಕ್ಕೆ

ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆ
ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಮಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಎಸ್. ನಾಗೇಶ್ ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಕಲ್ಲಡ್ಕಕ್ಕೆ ಆಗಮಿಸಲಿದ್ದಾರೆ.

ಬೆಳಿಗ್ಗೆ 8 ಗಂಟೆಗೆ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜು ಭೇಟಿ ನೀಡುವರು. 9.20ಕ್ಕೆ ಕಲ್ಲಡ್ಕದಲ್ಲಿ ಆಯೋಜಿಸಿರುವ ಶ್ರೀರಾಮ ವಿದ್ಯಾಕೇಂದ್ರ ಸೆಕೆಂಡರಿ ಸ್ಕೂಲ್ ಆರಂಭ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸುವರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಸಹಿತ ಗಣ್ಯರು ಉಪಸ್ಥಿತರಿರುವರು. ಬೆಳಿಗ್ಗೆ 11.15ಕ್ಕೆ ಮಂಗಳೂರಿನಲ್ಲಿ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರುಗಳಿಗೆ ಆಯೋಜಿಸಲಾಗಿರುವ  ಎನ್.ಇ.ಪಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ