ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ನೀರಪಲ್ಕೆ ಮುಕ್ಕುಡ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಆದ ಭೂಕುಸಿತಕ್ಕೆ ಸಂಬಂಧಿಸಿದಂತೆ, ಓರ್ವ ಸಾವನ್ನಪ್ಪಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಮತ್ತೋರ್ವನನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಕೇರಳದ ಪಾಲಕ್ಕಾಡ್ ನಿವಾಸಿ ಬಿಜು (45) ಸಾವನ್ನಪ್ಪಿದವರು. ಕಣ್ಣೂರಿನ ಜಾನಿ (44) ಮತ್ತು ಕೊಟ್ಟಾಯಂನ ಬಾಬು (46) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲಪ್ಪುರದ ಸಂತೋಷ್ (46) ಎಂಬಾತನ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.


ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "UPDATE: ಕಾರ್ಮಿಕರಿದ್ದ ಮನೆ ಮೇಲೆ ಭೂಕುಸಿತ: ಓರ್ವ ಸಾವು, ಇಬ್ಬರ ರಕ್ಷಣೆ, ಮಣ್ಣಿನಡಿಯಲ್ಲಿರುವ ಮತ್ತೋರ್ವನಿಗಾಗಿ ರಕ್ಷಣಾ ಕಾರ್ಯಾಚರಣೆ, ಸ್ಥಳೀಯರ ನೆರವು"