ಬಂಟ್ವಾಳ: ಪಂಜಿಕಲ್ಲುವಿನಲ್ಲಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಭೂಸಮಾಧಿಯಾದ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಬಂದ ಬಳಿಕ ಸರ್ಕಾರದ ಮಟ್ಟದಲ್ಲಿ ಪರಿಹಾರ ಕೊಡುವ ಭರವಸೆಯನ್ನುಸ್ಥಳಕ್ಕೆ ಗುರುವಾರ ಭೇಟಿ ನೀಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೀಡಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು
ಘಟನೆ ನಡೆದ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿ ಪೋಲಿಸ್ ಇಲಾಖೆ ತಹಸೀಲ್ದಾರ್ ಪಿ.ಡಿ.ಒ , ಅಗ್ನಿಶಾಮಕ ದಳ, ಎನ್.ಡಿ.ಆರ್.ಎಪ್ ಹಾಗೂ ಕಾರ್ಯಕರ್ತರು, ಸ್ಥಳೀಯರು ಆಗಮಿಸಿ ಮಣ್ಣಿನೊಳಗೆ ಸಿಲುಕಿಕೊಂಡಿದ್ದ ನಾಲ್ವರನ್ನು ರಕ್ಷಣೆ ಮಾಡುವ ಪ್ರಯತ್ನ ಮಾಡಿದ್ದಾರೆ .ದುರದೃಷ್ಟವಶಾತ್ ನಾಲ್ವರು ಕಾರ್ಮಿಕರ ಪೈಕಿ ಓರ್ವನನ್ನು ಮಾತ್ರ ಜೀವಂತ ಉಳಿಸಿಕೊಳ್ಳಲು ಸಾಧ್ಯವಾಯಿತು ಎಂದ ಅವರು, ಪೂರ್ಣ ವರದಿ ಬಂದ ನಂತರ ಸರಕಾರದ ಮಟ್ಟದ ಲ್ಲಿ ಸಾಧ್ಯವಿರುವ ಪರಿಹಾರವನ್ನು ನೀಡುತ್ತೇವೆ ಎಂದರು.
ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ಪಿ.ಡಿ.ಒ.ವಿದ್ಯಾ ಶಿವಾನಂದ, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮಕರಣೀಕ ಕುಮಾರ್ , ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Be the first to comment on "ಪಂಜಿಕಲ್ಲು ಭೂಕುಸಿತ ಘಟನೆ: ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್ ಭೇಟಿ"