ಪ್ರಾಕೃತಿಕ ವಿಕೋಪ ಹಿನ್ನೆಲೆ ಶಾಸಕ ರಾಜೇಶ್ ನಾಯ್ಕ್ ತುರ್ತು ಸಭೆ, ಅಪಾಯದ ಸನ್ನಿವೇಶವಿದ್ದರೆ ಸ್ಥಳಾಂತರ ಮಾಡಲು ಅಧಿಕಾರಿಗಳಿಗೆ ಸೂಚನೆ

ಬಂಟ್ವಾಳ: ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರ ಕಚೇರಿಯಲ್ಲಿ ಗುರುವಾರ ತುರ್ತು ಸಭೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಅಪಾಯದ ಸನ್ನಿವೇಶಗಳಿದ್ದ ಸಂದರ್ಭ ಕೂಡಲೇ ಸ್ಥಳಾಂತರ ಪ್ರಕ್ರಿಯೆ ನಡೆಸಲು ಅ ಸೂಚಿಸಿದರು.

ಮಳೆಗಾಲದಲ್ಲಿ ಉಂಟಾಗಬಹುದಾದ ಸಮಸ್ಯೆ ಪರಿಹರಿಸಲು ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ನಡೆದ ದುರಂತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಮುಂದಿನ ದಿನಗಳಲ್ಲಿ ತಾಲೂಕಿನ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅವರು ತಹಸೀಲ್ದಾರ್ ಡಾ. ಸ್ಮಿತಾ ರಾಮು ಮತ್ತು ತಾಪಂ ಇಒ ರಾಜಣ್ಣ ಅವರಿಗೆ ಸೂಚಿಸಿದರು.

ಮಳೆ ಹಾನಿಯಿಂದ ಜನರ ಜೀವಕ್ಕೆ ಅಪಾಯವಾಗುವ ರೀತಿಯ ಸನ್ನಿವೇಶಗಳು ಇದ್ದರೆ , ಅದಕ್ಕೆ ಪೂರ್ವಭಾವಿ ಯಾಗಿ ಅಂತಹ ಕುಟುಂಬಗಳನ್ನು ‌ಬೇರೆ ಕಡೆಗೆ ಸ್ಥಳಾಂತರ ಮಾಡಿ ಅವರಿಗೆ ಸೂಕ್ತ ವ್ಯವಸ್ಥೆ ‌ಕಲ್ಪಿಸಬೇಕು ಎಂದು ಅವರು ಸೂಚಿಸಿದರು.

ಜಾಹೀರಾತು

ತಗ್ಗುಪ್ರದೇಶದಲ್ಲಿ ವಾಸಮಾಡುವ ಕುಟುಂಬಗಳ ಎಚ್ಚರಿಕೆ ವಹಿಸಿ, ಅವರ ಬಗ್ಗೆ ಹೆಚ್ಚಿನ ನಿಗಾವಹಿಸಿ , ನೆರೆ ಬಂದ ಸಂದರ್ಭದಲ್ಲಿ ಅವರಿಗೆ ಸೂಕ್ತವಾದ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ರಸ್ತೆ ಬದಿಯಲ್ಲಿ ಮೆಸ್ಕಾಂ ವಿದ್ಯುತ್ ‌ಕಂಬಗಳಿಗೆ ಹಾಗೂ ಇತರ ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾಗುವ ಸ್ಥಳದಲ್ಲಿ ‌ಮರಗಳು ಇದ್ದರೆ ಅಂತಹ ಮರಗಳ ತೆರವು ಕಾರ್ಯವನ್ನು ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಜೊತೆಯಾಗಿ ಮಾಡಬೇಕು ಎಂದು ತಿಳಿಸಿದರು. ‌ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಹಾಗೂ ಇತರ ಕಡೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವ ‌ನಿಟ್ಟಿನಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸುವಂತೆಯೂ ಸೂಚಿಸಿದರು.

ಮಳೆಗಾಲದಲ್ಲಿ ಉಂಟಾಗುವ ಸಮಸ್ಯೆ ಗಳಿಗೆ ಶೀಘ್ರವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷ, ಪಿ.ಡಿ.ಒ.ಕಂದಾಯ ನಿರೀಕ್ಷಕ , ಗ್ರಾಮ ಕರಣೀಕ ಪೋಲೀಸ್ ಅಧಿಕಾರಿಗಳ ಸಭೆ ನಡೆಸುವ ಬಗ್ಗೆ ಸಭೆಯಲ್ಲಿ ತಿಳಿಸಿದರು. ಈ ಸಂದರ್ಭ ಮೆಸ್ಕಾಂ ಪ್ರಭಾರ ಇಇ ಪ್ರಶಾಂತ್ ಪೈ, ಎಇಇ ನಾರಾಯಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪ್ರಾಕೃತಿಕ ವಿಕೋಪ ಹಿನ್ನೆಲೆ ಶಾಸಕ ರಾಜೇಶ್ ನಾಯ್ಕ್ ತುರ್ತು ಸಭೆ, ಅಪಾಯದ ಸನ್ನಿವೇಶವಿದ್ದರೆ ಸ್ಥಳಾಂತರ ಮಾಡಲು ಅಧಿಕಾರಿಗಳಿಗೆ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*