ಭಾರಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತು ಶನಿವಾರವೂ ಶಾಲೆಗೆ ರಜೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲೂ ಶಾಲೆಗೆ ರಜೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಜಡಿಮಳೆಗೆ ತತ್ತರಿಸಿ ಹೋಗಿರುವ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರಾಂತ್ಯದವರೆಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಮುಂಜಾಗರೂಕತಾ ಕ್ರಮಗಳನ್ನು ಘೋಷಿಸಿದ್ದಾರೆ.
ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ವಿಪತ್ತು ನಿರ್ವಹಣೆಯನ್ನು ಚಾಚು ತಪ್ಪದೆ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಡಿಸಿ ಆದೇಶಿಸಿದ್ದಾರೆ.
ಮಂಗಳವಾರದಿಂದ ಶಾಲಾ ಕಾಲೇಜಿಗೆ ನೀಡಿದ್ದ ರಜೆಯನ್ನು ಶುಕ್ರವಾರ, ಶನಿವಾರಕ್ಕೂ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು, ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
Be the first to comment on "ಧಾರಾಕಾರ ಮಳೆ: ದ.ಕ, ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯದವರೆಗೆ ಶಾಲೆಗೆ ರಜೆ"